ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಧಿಕಾರ ಸ್ವೀಕಾರ ಸಮಾರಂಭದ ಆಹ್ವಾನಕ್ಕಾಗಿ ಭಿಕ್ಷೆ ಬೇಡಲು ಜೈಶಂಕರ್ ಅಮೆರಿಕಕ್ಕೆ ಅನೇಕ ಬಾರಿ ಭೇಟಿ ನೀಡಬೇಕಾಯಿತು ಎಂಬ ರಾಹುಲ್ ಗಾಂಧಿ ಹೇಳಿಕೆ ಭಾರೀ ವಿವಾದ ಸೃಷ್ಟಿಸಿದೆ.
ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹಾಗೂ ಸಚಿವ ಕಿರಣ್ ರಿಜಿಜು ಬಲವಾಗಿ ಖಂಡಿಸಿದ್ದಾರೆ.
ಜೈಶಂಕರ್, ಈ ಆರೋಪ ವನ್ನು ಉದ್ದೇಶಪೂರ್ವಕ ಸುಳ್ಳು ಎಂದು ತಳ್ಳಿಹಾಕಿದ್ದಾರೆ. ತಾವು ಕಳೆದ ಡಿಸೆಂಬರ್ನಲ್ಲಿ ನಡೆದ ಯುಎಸ್. ಭೇಟಿಯ ವೇಳೆ, ಬೈಡನ್ ಆಡಳಿತದ ಅಧಿಕಾರಿಗಳು ಮತ್ತು ಭಾರತೀಯ ರಾಯಭಾರಿಗಳೊಂದಿಗೆ ಸಭೆ ನಡೆಸಿದ್ದೇವೆಯೇ ಹೊರತು ಆಹ್ವಾನದ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ. ಎಂದು ಸ್ಪಷ್ಟಪಡಿಸಿದ್ದಾರೆ. ಇಂತಹ ಆಧಾರರಹಿತ ಹೇಳಿಕೆಗಳು ಭಾರತದ ಜಾಗತಿಕ ವರ್ಚಸ್ಸಿಗೆ ಧಕ್ಕೆ ತರುತ್ತವೆ ಎಂದು ಪ್ರತಿಪಾದಿಸಿದ ಅವರು, ಭಾರತವು ಸಾಮಾನ್ಯವಾಗಿ ಇಂತಹ ಕಾರ್ಯಕ್ರಮಗಳಿಗೆ ವಿಶೇಷ ರಾಯಭಾರಿಗಳನ್ನು ಕಳುಹಿಸುವುದರಿಂದ ಭಾರತದ ಪ್ರಧಾನಿ ವಿದೇಶಿ ನಾಯಕರ ಅಧಿಕಾರ ಸ್ವೀಕಾರ ಸಮಾರಂಭಗಳಿಗೆ ಹಾಜರಾಗುವುದಿಲ್ಲ ಎಂದು ಒತ್ತಿ ಹೇಳಿದರು.