ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ನಿವೇಶನ ಹಂಚಿಕೆಯ ಹಗರಣದ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಅದರಿಂದ ಹೊರ ಬರುವುದಕ್ಕೆ ತೀವ್ರ ಕಸರತ್ತು ನಡೆಸುತ್ತಿರುವಾಗಲೇ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಮುಡಾದ ನಿವೇಶನ ಹಂಚಿಕೆಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರ ವಿರುದ್ಧ ಲೋಕಾಯುಕ್ತ ಹಾಗೂ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿ, ಕಾನೂನು ಸಮರ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯ ಕೃಷ್ಣ ಈಗ, ಸಿಎಂ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರು ಬೇನಾಮಿ ಆಸ್ತಿ ಹೊಂದಿದ್ದಾರೆ, ಈ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿ ದಾಖಲೆಗಳೊಂದಿಗೆ ಮೈಸೂರು ಲೋಕಾಯುಕ್ತದ ಅಧಿಕಾರಿಗಳಿಗೆ ದೂರು ನೀಡಿದ್ದಾರೆ