43
ನವದೆಹಲಿ : ಉತ್ತರಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಬುಧವಾರ ಭೇಟಿ ನೀಡಲಿದ್ದು, ಬೆಳಗ್ಗೆ 11.00 ಗಂಟೆ ಸುಮಾರಿಗೆ ತ್ರಿವೇಣಿ ಸಂಗಮ ದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ.
ಪ್ರಧಾನಿಯವರ ಕಚೇರಿ ಹೇಳಿಕೆ ಬಿಡುಗಡೆ ಮಾಡಿದ್ದು ಫೆ.5ರಂದು ಪ್ರಧಾನಿ ಮೋದಿ ಸಂಗಮದಲ್ಲಿ ಮಿಂದೆದ್ದು ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಭಾರತದ ಅಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಿ ಉತ್ತೇಜಿಸುವ ಭಾಗವಾಗಿ ಆ ಧಾರ್ಮಿಕ ಸ್ಥಳಗಳಲ್ಲಿ ಅನೇಕ ವ್ಯವಸ್ಥೆಗಳನ್ನು ಮಾಡುತ್ತಿದ್ದಾರೆ’ ಎಂದು ತಿಳಿಸಲಾಗಿದೆ. ಜ.13ರ ಪೌಶ್ ಪೌರ್ಣಮಿಯಂದು ಆರಂಭವಾದ ಕುಂಭಮೇಳವು ಫೆ.26ರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)