Home » ಈಗ ಗುಜರಾತ್‌ನಲ್ಲೂ ಏಕರೂಪ ನಾಗರಿಕ ಸಂಹಿತೆ
 

ಈಗ ಗುಜರಾತ್‌ನಲ್ಲೂ ಏಕರೂಪ ನಾಗರಿಕ ಸಂಹಿತೆ

by Kundapur Xpress
Spread the love

ಗಾಂಧಿನಗರ :ಉತ್ತರಾಖಂಡದಲ್ಲಿನ ಬಿಜೆಪಿ ಸರ್ಕಾರದ ಬಳಿಕ ಗುಜ ರಾತ್‌ನ ಬಿಜೆಪಿ ಸರ್ಕಾರ ಕೂಡ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮುಂದಾಗಿದೆ. ಈ ಸಂಬಂಧ ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ಯೊಂದನ್ನು ಸರ್ಕಾರ ರಚಿಸಿದೆ

ನಿವೃತ್ತ ನ್ಯಾ. ರಂಜನಾ ದೇಸಾಯಿ ನೇತೃತ್ವದ ಐವರ ಸಮಿತಿ 45 ದಿನದಲ್ಲಿ ಏಕರೂಪದ ನಾಗರಿಕ ಸಂಹಿತೆಗೆ ಸಂಬಂಧಿಸಿದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಿದೆ. ಆ ಬಳಿಕ ಸರ್ಕಾರ ಕಾನೂನು ಜಾರಿಗೆ ಸಂಬಂಧಿಸಿದ ಮುಂದಿನ ನಿರ್ಧಾರ ತೆಗೆದುಕೊಳ್ಳ ಲಿದೆ ಎಂದು ಭೂಪೇಂದ್ರ ಪಟೇಲ್ ತಿಳಿಸಿದ್ದಾರೆ.

ಈ ಸಮಿತಿಯು ಮುಸ್ಲಿಂ ಧಾರ್ಮಿಕ ನಾಯಕರೂ ಸೇರಿ ಎಲ್ಲಾ ವರ್ಗದ ಜನರನ್ನು ಭೇಟಿಯಾಗಿ ವರದಿ ಸಿದ್ದಪಡಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ

 

Related Articles

error: Content is protected !!