Home » ರಾಜ್ಯದಲ್ಲಿ ದಸ್ತಾವೇಜು ನೋಂದಣಿ ಸ್ತಬ್ದ
 

ರಾಜ್ಯದಲ್ಲಿ ದಸ್ತಾವೇಜು ನೋಂದಣಿ ಸ್ತಬ್ದ

by Kundapur Xpress
Spread the love

ಬೆಂಗಳೂರು : ರಾಜ್ಯದ ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಹಿಡಿದ ‘ಸರ್ವರ್ ಗ್ರಹಣ’ ಸದ್ಯಕ್ಕೆ ತಪ್ಪುವ ಲಕ್ಷಣ ಕಾಣುತ್ತಿಲ್ಲ ಹಲವು ತಿಂಗಳಿನಿಂದ ಕಾಡುತ್ತಿದ್ದ ಸರ್ವರ್ ಸಮಸ್ಯೆ ಕಳೆದ ಶನಿವಾರದಿಂದ ಬಹುತೇಕ ನೋಂದಣಿ ಪ್ರಕ್ರಿಯೆಯನ್ನೇ ಸ್ತಬ್ದಗೊಳಿಸಿದೆ. ಇದರಿಂದ ರಾಜ್ಯಾದ್ಯಂತ ಆಸ್ತಿ ನೋಂದಣಿಗೆ ಸಾರ್ವಜನಿಕರು ಪರವಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದಲ್ಲಿ ಪ್ರತಿದಿನ ಸರಾಸರಿ 7ರಿಂದ 8 ಸಾವಿರ ದಸ್ತಾವೇಜುಗಳು ನೋಂದಣಿಯಾಗುತ್ತಿತ್ತು. ಆದರೆ ಶನಿವಾರದಿಂದ ಕಾವೇರಿ 2.0 ತಂತ್ರಾಂಶ ಸಮರ್ಪಕವಾಗಿ ಕಾರ್ಯನಿರ್ವಹಿಸದ ಕಾರಣ ದಸ್ತಾವೇಜುಗಳ ನೋಂದಣಿ ಸಂಪೂರ್ಣ ಇಳಿಕೆಯಾಗಿದೆ. ರಾಜ್ಯದಲ್ಲಿನ 252 ಉಪನೋಂದಣಾಧಿಕಾರಿಗಳ ಕಚೇರಿಗ ಳಲ್ಲಿ ಶನಿವಾರದಿಂದ 600ಕ್ಕಿಂತ ಕಡಿಮೆ ದಸ್ತಾವೇಜುಗಳು ನೋಂದಣಿಯಾಗಿವೆ. ಎಲ್ಲ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಶನಿವಾರ, ಸೋಮವಾರ ಮತ್ತು ಮಂಗಳವಾರ ಜನಜಂಗುಳಿ ಹೆಚ್ಚಾಗಿದ್ದರೂ ಕೆಲಸ ಮಾತ್ರ ಆಗಿಲ್ಲ ಇದಕ್ಕೆ ಕಾವೇರಿ 2.0 ತಂತ್ರಾಂಶದಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆ ಕಾರಣ ಎನ್ನಲಾಗಿದ್ದು, ಮಂಗಳವಾರವೂ ಸಮಸ್ಯೆ ಮುಂದು ವರಿದಿದೆ. ಇ-ಖಾತಾ ಕಡ್ಡಾಯ ಘೋಷಣೆಯಾದ ನಂತರ ರಾಜ್ಯದಲ್ಲಿ ಆಸ್ತಿ ನೋಂದಣಿಗೆ ತಾಂತ್ರಿಕ ಸಮಸ್ಯೆ ಎದುರಾಗುತ್ತಲೇ ಬಂದಿದೆ. ಇದು ಇದೀಗ ವಿಕೋಪಕ್ಕೆ ಹೋಗಿದ್ದು, ನೋಂದಣಿಯೇ ಸ್ಥಗಿತಗೊಂಡಿದೆ.

ವಿಶೇಷವಾಗಿ ಶನಿವಾರದಿಂದ ಸಿಟಿಜನ್ ಲಾಗಿನ್ ಮತ್ತು ಸಬ್ ರಿಜಿಸ್ಟ್ರಾ‌ರ್ ಲಾಗಿನ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡ ಪರಿಣಾಮ ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆ ಬಹುತೇಕ ಸ್ತಬ್ಧವಾಗಿದೆ

 

Related Articles

error: Content is protected !!