Home » ವಿಶ್ವ ವಿನಾಯಕ : ಬೀಳ್ಕೊಡುಗೆ ಸಮಾರಂಭ
 

ವಿಶ್ವ ವಿನಾಯಕ : ಬೀಳ್ಕೊಡುಗೆ ಸಮಾರಂಭ

by Kundapur Xpress
Spread the love

ತೆಕ್ಕಟ್ಟೆ :  ವಿಶ್ವ ವಿನಾಯಕ ಸಿ.ಬಿ.ಎಸ್.ಇ ಶಾಲೆಯಲ್ಲಿ 10ನೇ ತರಗತಿಯ ಮಕ್ಕಳ ಬೀಳ್ಕೊಡುಗೆ ಸಮಾರಂಭವನ್ನು ನಡೆಸಲಾಯಿತು ಒಂಭತ್ತನೇ ತರಗತಿಯ ವಿದ್ಯಾರ್ಥಿಗಳು ಸಾಂಸ್ಕ್ರತಿಕ  ಕಾರ್ಯಕ್ರಮವನ್ನು ಆಯೋಜಿಸಿ ವಿವಿಧ ಸ್ಪರ್ಧೆಗಳನ್ನು ನಡೆಸಿದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ನಿರಂತರ 10 ವರ್ಷಗಳನ್ನು ಕಳೆದು ಹಲವು ಸವಿನೆನಪುಗಳನ್ನು ತಮ್ಮ ನೆನಪಿನ ಬುತ್ತಿಯಲ್ಲಿಟ್ಟುಕೊಂಡು ಮುಂದೆ ಸಾಗುವ ಅನಿವಾರ್ಯತೆಯಿಂದ ವಿದ್ಯಾರ್ಥಿಗಳು ಭಾವುಕರಾದರು.

ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿಯವರು ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಗಳಿಸಿ ಪೋಷಕರು ಹಾಗೂ ಶಾಲೆಗೆ ಕೀರ್ತಿ ತರುವಂತವರಾಗಲಿ ಎಂದು ಶುಭ ಹಾರೈಸಿದರು.
ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ. ಹೆಚ್‌ರವರು ಮುಂದಿನ ಉನ್ನತ ವಿದ್ಯಾಭ್ಯಾಸದ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕಿ ರೋಹಿಣಿ ಕಾರ್ಯಕ್ರಮ ಸಂಘಟಿಸಿದರು.

 

Related Articles

error: Content is protected !!