Home » ಕರ್ನಾಟಕದಲ್ಲಿರುವುದು ಕಡು ಭ್ರಷ್ಟ ಸರ್ಕಾರ
 

ಕರ್ನಾಟಕದಲ್ಲಿರುವುದು ಕಡು ಭ್ರಷ್ಟ ಸರ್ಕಾರ

ಸಂಸತ್ತಿನಲ್ಲಿ ದೇವೇಗೌಡ

by Kundapur Xpress
Spread the love

ನವದೆಹಲಿ : ರಾಜ್ಯಸಭೆಯಲ್ಲಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಎಚ್.ಡಿ.ದೇವೇಗೌಡ ಅವರು, ಕರ್ನಾಟಕದಲ್ಲಿ ಇರುವುದು ಅತ್ಯಂತ ಭ್ರಷ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸಭೆಯಲ್ಲಿ ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಚರ್ಚೆಯಲ್ಲಿ ಗುರುವಾರ ಮಾತನಾಡಿ, ಲೋಕಸಭೆಯಲ್ಲಿ ಬಿಜೆಪಿಗೆ ಸಿಕ್ಕಿರುವುದು 240 ಸ್ಥಾನಗಳಷ್ಟೇ ಎಂದು ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ.ಆದರೆ ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್ 136 ಸ್ಥಾನ ಗೆದ್ದುಕೊಂಡಿದೆ ಅದರಿಂದ ಉಪಯೋಗವೇನು ? ಎಂದರು.

ಕಾಂಗ್ರೆಸ್ ಯಾವ ರೀತಿ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದೆ ಎಂಬುದು ಎಲ್ಲರಿಗೂ ಗೊತ್ತು. ಅಲ್ಲಿರುವುದು ಕಡು ಭ್ರಷ್ಟ ಸರ್ಕಾರ, ಪ್ರಗತಿಶೀಲ ರಾಜ್ಯ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ಹಾಳು ಮಾಡುತ್ತಿದೆ. ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನೂ ಚುನಾವಣೆಗೆ ಬಳಸಿಕೊಂಡಿದೆ. ಯಾವುದೇ ಅಂಜಿಕೆ ಇಲ್ಲದೆ ಭ್ರಷ್ಟಾಚಾರದಲ್ಲಿ ತೊಡಗಿರುವ ಈ ಸರ್ಕಾರದ ಕೆಟ್ಟ ಆಡಳಿತದಿಂದ ಅನೇಕ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡರು ಎಂದು ದೇವೇಗೌಡರು ಗುಡುಗಿದರು

 

Related Articles

error: Content is protected !!