34
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೇಳಿಬಂದಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್ ಇಂದು ಶುಕ್ರವಾರ ಪ್ರಕಟಿಸಲಿದೆ.
ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯ ಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆಯನ್ನು 2025ರಜ.27ರಂದು ಪೂರ್ಣಗೊಳಿಸಿ ಕಾಯ್ದಿರಿಸಿರುವ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಇಂದು ಬೆಳಗ್ಗೆ 10.30ಕ್ಕೆ ಪ್ರಕಟಿಸಲಿದೆ.
ಈ ಹಿಂದೆಯೇ ಮುಡಾ ಪ್ರಕರಣದ ತನಿಖೆ ನಡೆಯುವುದು ಅತ್ಯಗತ್ಯವಿದೆ ಎಂದು ತೀರ್ಮಾನಿಸಿ ಪೊಲೀಸ್ ತನಿಖೆಗೆ ಅನುಮತಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಇದೀಗ ಯಾವ ಆದೇಶ ನೀಡಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)