ಕಾರ್ಕಳ : ರಾಜ್ಯದಲ್ಲಿರುವುದು ಸಿದ್ದರಾಮಯ್ಯನವರ ಎಮ್ಮೆ ಚರ್ಮದ ಸರ್ಕಾರ. ಅದಕ್ಕೆ ಸಂವೇದನಾಶೀಲತೆ ಇಲ್ಲದೆ ಭಂಡತನ ತೋರಿಸುತ್ತಿದೆ. ರಾಜ್ಯದಲ್ಲಿ 22 ಲಕ್ಷ ರೇಷನ್ ಕಾರ್ಡ್‌ಗಳನ್ನು ಹಾಗೂ 12 ಲಕ್ಷ ಬಗರ್‌ಹುಕುಂ ಜಮೀನು ತಿರಸ್ಕಾರ ಮಾಡಲು ಹೊರಟಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಹೇಳಿದರು.ಅವರು ಕಾರ್ಕಳ ತಾಲೂಕು ಕಚೇರಿ ಬಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಆರ್ಭಟ ಹೆಚ್ಚುತ್ತಿದೆ. ಮೈಕ್ರೋ ಫೈನಾನ್ಸ್ ಗೆ ಕಡಿವಾಣ ಹಾಕುವ ಕೆಲಸವನ್ನು ಸರ್ಕಾರ ಮಾಡುತ್ತಿಲ್ಲ. ರಾಜ್ಯದಲ್ಲಿ ದುಡಿಯುವ ಕೈಗಳಿಗೆ ಕೆಲಸ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರವು ಯುವಕರಿಗೆ ಉದ್ಯೋಗ ನೀಡುವುದರಲ್ಲಿ ವಿಫಲವಾಗಿದೆ. ಕಟ್ಟಡ ನಿರ್ಮಾಣಕ್ಕೆ ಸಂಬಂಧಪಟ್ಟ ಯಾವುದೇ ವಸ್ತುಗಳು ಸಿಗುತ್ತಿಲ್ಲ ಎಂದರು.
ರಾಜ್ಯದ ಎಲ್ಲ ಸಚಿವರು ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್‌ನ ಕಾರ್ಯಕರ್ತರು ಸರ್ಕಾರಿ ಕಚೇರಿಗಳಲ್ಲಿ ಬ್ರೋಕರ್ ಗಳಾಗಿದ್ದಾರೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿಟ್ ಕಾಯಿನ್ ಹಗರಣದಲ್ಲಿ ಸಿಲುಕಿದ್ದರೂ ಆರಂಭದಲ್ಲೇ ತೀವ್ರ ವಿಚಾರಣೆ ಮಾಡದೆ ಇರುವುದಕ್ಕೆ ಕಾರಣ ಏನು ಎಂದು ಅವರು ಪ್ರಶ್ನಿಸಿದರು
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)