Home » ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲ
 

ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲ

by Kundapur Xpress
Spread the love

ಬೆಂಗಳೂರು : ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕದೇ ವಾಪಸ್ ಕಳುಹಿಸಿದ್ದಾರೆ. ಇದರಿಂದ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾದಂತಾಗಿದೆ.

ಸುಗ್ರೀವಾಜ್ಞೆಯಲ್ಲಿರುವ ಹಲವು ಅಂಶಗಳ ಕುರಿತು ಸ್ಪಷ್ಟನೆ ಕೇಳಿರುವ ರಾಜ್ಯಪಾಲ ಥಾವರಚಂದ್ ಗೆಹಲೋತ್ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಕಾನೂನಿನಲ್ಲಿ ಸಾಲ ಕೊಟ್ಟವರಿಗೆ ರಕ್ಷಣೆ ಕಾಣುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಹತ್ವದ ವಿಷಯವೆಂದರೆ ರಿಸರ್ವ್ ಬ್ಯಾಂಕ್ ನೊಂದಿಗೆ ನೋಂದಾಯಿತವಾದ ಯಾವುದೇ ಬ್ಯಾಂಕಿಂಗ್ ಅಥವಾ ಬ್ಯಾಂಕಿಂಗ್ ಯೇತರ ಹಣಕಾಸು ಸಂಸ್ಥೆಗಳಿಗೆ ಈ ಸುಗ್ರೀವಾಜ್ಞೆಯು ಅನ್ವಯಿಸುವುದಿಲ್ಲ ಆದ್ದರಿಂದ ಅನೇಕ ಸಾಲ ನೀಡುವ ಸಂಸ್ಥೆಗಳು ಸುಗ್ರೀವಾಜ್ಞೆ ವ್ಯಾಪ್ತಿಯಿಂದ ಹೊರಗಿವೆ ಎಂದು ತಿಳಿಸಿದ್ದಾರೆ

 

Related Articles

error: Content is protected !!