32
ಬೆಂಗಳೂರು : ಅಪ್ರಾಪ್ತ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಎಫ್ಐಆರ್ ಹಾಗೂ ಸಿಐಡಿ ಪೊಲೀಸರು ನಡೆಸಿರುವ ತನಿಖೆ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಆದರೆ, ಇದೇ ಪ್ರಕರಣ ಸಂಬಂಧ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು ಸದಾಶಿವನಗರ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್, ಆ ನಂತರ ಸಿಐಡಿ ತನಿಖೆ ನಡೆಸಿ ಸಲ್ಲಿಸಿರುವ ಆರೋಪ ಪಟ್ಟಿ ಹಾಗೂ ಅದನ್ನು ಆಧರಿಸಿ ವಿಚಾರಣಾ ನ್ಯಾಯಾಲಯ ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿರುವ ಕ್ರಮ ರದ್ದುಪಡಿಸಬೇಕು ಮತ್ತು ನಿರೀಕ್ಷಣಾ ಜಾಮೀನು ನೀಡಬೇಕೆಂದು ಕೋರಿ ಯಡಿಯೂರಪ್ಪ ಪ್ರತ್ಯೇಕ ಎರಡು ಅರ್ಜಿ ಸಲ್ಲಿಸಿದ್ದರು.
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)