41
ಕಟಪಾಡಿ : ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಾರ್ಯಾಲಯ ಚಿತ್ರದುರ್ಗ ಇವರ ಸಯುಕ್ತ ಆಶ್ರಯದಲ್ಲಿ ಪ್ರೌಢಶಾಲಾ ಹಾಗೂ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ 2024-25 ಚಿತ್ರದುರ್ಗದಲ್ಲಿ ಫೆಬ್ರವರಿ 07ರಂದು ನಡೆದ ಕವನ ವಾಚನ ಸ್ಪರ್ಧೆಯಲ್ಲಿ ಕಟಪಾಡಿಯ ತ್ರಿಶಾ ವಿದ್ಯಾ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಭವಿಷ್ ಬೆಳ್ಳಾರೆ ಪ್ರಥಮ ಬಹುಮಾನ ಪಡೆದಿರುತ್ತಾರೆ.
ಇವರು ಸುಳ್ಯ ತಾಲೂಕು ಬೆಳ್ಳಾರೆ ತಡಗಜೆಯ ರುಕ್ಮಯ್ಯ ಮೂಲ್ಯ ಪಿ ಮತ್ತು ಭಾರತಿ ದಂಪತಿಗಳ ಪುತ್ರ. ಇವರ ಈ ಸಾಧನೆಯನ್ನ ತ್ರಿಶಾ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದರು.
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)