15
ಹೊಸದಿಲ್ಲಿ: ಚುನಾವಣೆಗಳಿಗೆ ಮುಂಚಿತವಾಗಿ ರಾಜಕೀಯ ಪಕ್ಷಗಳು ಘೋಷಣೆ ಮಾಡುವ ಉಚಿತ ಯೋಜನೆಗಳ ‘ ವಿರುದ್ಧ ಕಿಡಿಕಾರಿರುವ ಸುಪ್ರೀಂಕೋರ್ಟ್, ನಾವು ಪರಾವಲಂಬಿ ವರ್ಗವನ್ನು ಸೃಷ್ಟಿಸುತ್ತಿಲ್ಲವೇ ಎಂದು ಪ್ರಶ್ನೆ ಮಾಡಿದೆ.
ವಿವಿಧ ರಾಜ್ಯಗಳ ಉಚಿತ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಎ.ಜಿ.ಮಾಸಿಹ್ ಅವರಿದ್ದ ದ್ವಿಸದಸ್ಯ ಪೀಠವು, ಜನ ಕೆಲಸ ಮಾಡದೆ ಪಡಿತರ ಮತ್ತು ಹಣ ಪಡೆಯುತ್ತಿದ್ದಾರೆ ಎಂದು ಹೇಳಿತು. ನಗರ ಪ್ರದೇಶ ಗಳಲ್ಲಿನ ವಸತಿ ರಹಿತ ವ್ಯಕ್ತಿಗಳಿಗೆ ಆಶ್ರಯ ನೀಡುವ ಹಕ್ಕಿನ ಬಗ್ಗೆ ವಿಚಾರಣೆ ನಡೆಸಿದ ಈ ಪೀಠವು, ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡುವ ಮೂಲಕ ಅವರನ್ನು ಸಮಾಜದ ಮುಖ್ಯವಾಹಿನಿಯ ಭಾಗವಾಗಲು ಉತ್ತೇಜಿಸುವ ಬದಲು, ನಾವು ಪರಾವಲಂಬಿಗಳ ವರ್ಗವನ್ನು ಸೃಷ್ಟಿಸುತ್ತಿಲ್ಲವೇ ಎಂದು ನ್ಯಾಯಪೀಠ ಪ್ರಶ್ನಿಸಿತು
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)