ಕುಂದಾಪುರ : ಛತ್ರಪತಿ ಶ್ರೀ ಶಿವಾಜಿ ಅಭಿಮಾನಿ ಬಳಗದ ಆಯೋಜನೆಯಲ್ಲಿ ಗುರುವಾರ ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವವು ಬಸ್ರೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಉಮೇಶ್ ಆಚಾರ್ಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ ಈ ಮಹೋತ್ಸವದಲ್ಲಿ ಗೋವಾದ ಮುಖ್ಯಮಂತ್ರಿ ಡಾ.ಪ್ರಮೋದ್ ಪಾಂಡುರಂಗ ರಾವ್ ಸಾವಂತ್ ಗೌರವ ಅತಿಥಿಯಾಗಿ ಭಾಗವಹಿಸಲಿದ್ದು, ದೇವಸ್ಥಾನದ ಆಡಳಿತ ಮೊಕ್ತಸರರಾದ ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಪುಣೆಯ ಭಾರತೀಯ ಸಂತ ಸಭಾದ ಸಂಘಟನಾ ಪ್ರಧಾನ ಕಾರ್ಯದರ್ಶಿ ಡಾ. ಸಂದೀಪ್ ರಾಜ್ ಮಹಾದೇವರಾವ್ ಮಹಿಂದ್, ಮೂಡ್ಲಕಟ್ಟೆ ಐಎಂಜೆ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಸಿದ್ದಾರ್ಥ ಶೆಟ್ಟಿ ಭಾಗವಹಿಸಲಿದ್ದಾರೆ. ಕೊಡಗಿನ ರಾಷ್ಟ್ರೀಯವಾದಿ ನಾಟಕಕಾರ ಅಡ್ಡಂಡ ಸಿ.. ಕಾರ್ಯಪ್ಪ ದಿಕ್ಕೂಚಿ ಭಾಷಣ ಮಾಡಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಡಾ.ಸಂದೀಪ್‌ರಾಜ್ ಮಹಾದೇವರಾವ್ ಮಹಿಂದ್, ಬಳಗದ ಕಾರ್ಯದರ್ಶಿ ರಾಜೇಶ್ ಜಿ. ಕೆಳಮನೆ, ಸಂಚಾಲಕರಾದ ಸುಧೀರ್ ಮೇರ್ಡಿ ಮತ್ತು ಸುರೇಶ್ ಕೃಷ್ಣ ನಾಯಕ್ ಇದ್ದರು.
![](https://kundapurxpress.com/wp-content/uploads/2025/02/WhatsApp-Image-2025-02-05-at-12.29.39-PM.jpeg)
![](https://kundapurxpress.com/wp-content/uploads/2024/11/IMG-20241128-WA0000.jpg)