ಹೆಮ್ಮಾಡಿ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಕುಂದಾಪುರ: ಸುಳ್ಳು ಪ್ರಚಾರ ಮಾಡುವವರ ವಿರುದ್ದ ಸತ್ಯದ ಪ್ರಚಾರ ಮಾಡಬೇಕು ಎಂದು ಕಾಂಗ್ರೇಸ ಕಾರ್ಯಕರ್ತರಿಗೆ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಕಿವಿಮಾತು ಹೇಳಿದರು ಪಕ್ಷದ ಕಾರ್ಯಕರ್ತರು ಮನೆ-ಮನೆಗೆ ತೆರಳಿ ಕಾಂಗ್ರೆಸ್ ಪಕ್ಷ ಈಗಾಗಲೇ ನೀಡಿರುವ ಗ್ಯಾರೆಂಟಿ ಕಾರ್ಡ್ನ ಯೋಜನೆಗಳ ಸಮಗ್ರ ವಿವರವನ್ನು ನೀಡುವ ಮೂಲಕ, ಕ್ಷೇತ್ರದ ಹೊರಗಿಂದ ಬಂದು ಸುಳ್ಳು ಪ್ರಚಾರ ಕಾರ್ಯ ಮಾಡುವುದರ ವಿರುದ್ದ ಸತ್ಯದ ಪ್ರಚಾರವನ್ನು ಮಾಡಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು.
ಹೆಮ್ಮಾಡಿ ಸಮೀಪದ ಕಟ್ಬೇಲ್ತೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಕೇವಲ ಅಪಪ್ರಚಾರದ ಮೂಲಕ ಚುನಾವಣೆಗಳನ್ನು ಗೆಲ್ಲುವ ತಂತ್ರವನ್ನಾಗಿಸಿಕೊಂಡಿರುವ ಬಿಜೆಪಿ ಪಕ್ಷದ ಅಪಪ್ರಚಾರಗಳಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ಹಾಗೂ ದೇಶದ ಅಭಿವೃದ್ಧಿಗಾಗಿ ನೀಡಿರುವ ಕೊಡುಗೆಗಳನ್ನು ಹೇಳುವ ಮೂಲಕ ಮತದಾರರ ಮನವನ್ನು ಗೆಲ್ಲುವ ಪ್ರಯತ್ನ ಮಾಡಬೇಕು. ಮತ ಕ್ಷೇತ್ರದ ಪ್ರತಿ ಮನೆ ಮನೆಗಳಿಗೂ ಭೇಟಿ ನೀಡಿ, ನನ್ನ ಶಾಸಕತ್ವದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು, ಹಿಂದಿನ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮತದಾರರಿಗೆ ಮುಟ್ಟಿಸಬೇಕು ಎಂದರು.