ಉಡುಪಿ : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಯುಕ್ತ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವ ಭಾವಿಯಾಗಿ ಉಡುಪಿ ನಗರ ಹಾಗೂ ಗ್ರಾಮಾಂತರ ಜನಪ್ರತಿನಿಧಿಗಳ ಸಭೆ ಇಂದು ನಡೆಯಿತು.ಚುನಾವಣೆ ದೃಷ್ಟಿಯಿಂದ ನಗರ ಸಭಾ ವಾರ್ಡ್ ಹಾಗೂ ಪಂಚಾಯತ್ ಗಳಿಗೆ ಉಸ್ತುವಾರಿಗಳನ್ನು ನೇಮಿಸಲಾಯಿತು.ಸಭೆಯಲ್ಲಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಭಾಗವಹಿಸಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದರ ಜೊತೆಗೆ ಕಳೆದ 5 ವರ್ಷಗಳಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಬೇಕು ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶ್ ಪಾಲ್ ಸುವರ್ಣ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ನಾವೆಲ್ಲರೂ ಶ್ರಮಿಸಬೇಕು ಎಂದರು
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ಯಶ್ ಪಾಲ್ ಸುವರ್ಣ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ಜಿಲ್ಲಾ ಬಿಜೆಪಿ ವಕ್ತಾರರಾದ ರಾಘವೇಂದ್ರ ಕಿಣಿ, ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ರಾಜ್ಯ ಬಿಜೆಪಿ ಎಸ್. ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿಗಳಾದ ಗಣೇಶ್, ಕ್ಷೇತ್ರ ಪ್ರವಾಸ ಪ್ರಭಾರಿಗಳಾದ ಸುರೇಶ್ ಕುಮಾರ್ ಶೆಟ್ಟಿ, ಪಕ್ಷದ ಹಿರಿಯರು, ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು