ಕುಂದಾಪುರ:ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಮೂಡ್ಲಕಟ್ಟೆ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನೆಯನ್ನು ಭಾರತೀಯ ರೆಡ್ ಕ್ರಾಸ್ ಘಟಕ ಕುಂದಾಪುರ ಇದರ ಅಧ್ಯಕ್ಷರಾದ ಶ್ರೀಯುತ ಜಯಕರ್ ಶೆಟ್ಟಿಯವರು ನೆರವೇರಿಸಿ, ಪ್ರತಿಯೊಂದು ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕಗಳು ಪ್ರಾರಂಭಗೊಳ್ಳಬೇಕು. ಮಾನವೀಯತೆಯ ನೆಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವಂತಹದ್ದು, “ಯಾವುದೇ ಜಾತಿ, ಮತ, ಧರ್ಮ ಭೇದವಿಲ್ಲದೆ ಯಾರು ಕಷ್ಟದಲ್ಲಿ ಇರುತ್ತಾರೆಯೋ ಅಂತವರಿಗೆ ಸಹಾಯ ಮಾಡುವುದು ರೆಡ್ ಕ್ರಾಸ್ ಸಂಸ್ಥೆಯ ಮುಖ್ಯ ಉದ್ದೇಶ” ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಯುವ ರೆಡ್ ಕ್ರಾಸ್ ಕುಂದಾಪುರ ಇದರ ಸಂಯೋಜಕರಾದ ಶ್ರೀಯುತ ಸತ್ಯನಾರಾಯಣ್ ಪುರಾಣಿಕ್ ಇವರು ಪ್ರತಿಜ್ಞಾವಿಧಿಯನ್ನು ವಿದ್ಯಾರ್ಥಿಗಳ ಸಮ್ಮುಖದಲ್ಲಿ ನೆರವೇರಿಸಿದರು. ಹಾಗೆಯೇ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇದರ ತರಬೇತುದಾರರಾದ ಡಾ| ಸೋನಿ ಡಿ‘ಕೋಸ್ಟಾ ಅವರು ಪ್ರಥಮ ಚಿಕಿತ್ಸೆಯ ತರಬೇತಿ ಹಾಗೂ ಪ್ರಾತ್ಯಕ್ಷಿತೆಯನ್ನು ನಡೆಸಿಕೊಟ್ಟರು.ಪ್ರಾಂಶುಪಾಲೆಯವರಾದ ಡಾ| ಪ್ರತಿಭಾ ಎಂ ಪಟೇಲ್ ರವರು ಅಧ್ಯಕ್ಷೀಯ ಮಾತುಗಳಲ್ಲಿ, ವಿದ್ಯಾರ್ಥಿಗಳು ರೆಡ್ ಕ್ರಾಸ್ ನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಸಮಾಜಕ್ಕೆ ಇನ್ನೂ ಹೆಚ್ಚಿನ ಕೊಡುಗೆಗಳನ್ನು ನೀಡಬಹುದೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ರೆಡ್ ಕ್ರಾಸ್ ಘಟಕ ಕುಂದಾಪುರ ಇದರ ಖಜಾಂಚಿಯಾವರಾದ ಶ್ರೀಯುತ ಶಿವರಾಮ್ ಶೆಟ್ಟಿ, ಬೋಧಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಕಾಲೇಜು ಯುವ ರೆಡ್ ಕ್ರಾಸ್ ಘಟಕದ ಸಂಯೋಜಕಿ ಪ್ರೊ| ಶಬೀನಾ ಹೆಚ್. ರವರು ಸ್ವಾಗತಿಸಿದರು. ಬಿಸಿಎ ವಿದ್ಯಾರ್ಥಿನಿ ಕು| ನೇತ್ರಾವತಿ ಕಾರ್ಯಕ್ರಮ ನಿರ್ವಹಿಸಿದರು. ಕು| ಪ್ರತಿಭಾ ವಂದಿಸಿದರು.