ಕುಂದಾಪುರ:ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗವು ಆಯೋಜಿಸಿರುವ ‘ವಿ-ಗ್ರೋ’ ಬ್ಯುಸಿನೆಸ್ ಡೇ ಮೂರು ಹಂತದಲ್ಲಿ ಆಯೋಜನೆಗೊಂಡ ಈ ವಿನೂತನ ಕಾರ್ಯಕ್ರಮದ ಮೊದಲ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಹೊಸ-ಹೊಸ ವ್ಯವಹಾರಿಕ ಜ್ಞಾನವನ್ನು ಪ್ರಸ್ತುತ ಪಡಿಸಿದ್ದು, ಎರಡನೇ ಹಂತದಲ್ಲಿ ತಾವೇ ತಯಾರಿಸಿದ ಉತ್ಪನ್ನಗಳ ಮಳಿಗೆಯನ್ನಿಟ್ಟು ವ್ಯವಹಾರ ಮೇಳವನ್ನು ಸೃಷ್ಟಿಸಿ ವಿದ್ಯಾರ್ಥಿಗಳಿಗೆ ವಾಣಿಜ್ಯ ಸಂಬಂಧಿ ವಿಷಯಗಳನ್ನು ಪ್ರಾಯೋಗಿಕವಾಗಿ ತಿಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆದಿದೆ.
ಕುಂದಾಪುರ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿಗಳಾದ ಶ್ರೀ ಸೀತಾರಾಮ ನಕ್ಕತ್ತಾಯರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಗೆಲುವು ಸುಲಭ ಸಾಧನವಲ್ಲ ಅದಕ್ಕೆ ನಿರಂತರ ಪ್ರಯತ್ನಗಳು ಅತ್ಯಗತ್ಯ, ಕೆಲವೊಂದು ಸಂದರ್ಭದಲ್ಲಿ ಪ್ರಯತ್ನಗಳು ಸೋಲಬಹುದು ಆದರೆ ನಿಮ್ಮ ಪ್ರಯತ್ನ ಗೆಲುವಿನೆಡೆಗೆ ನಿರಂತರವಾಗಿರಬೇಕು ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಉಪನ್ಯಾಸಕರಾದ ಶ್ರೀ ನರೇಂದ್ರ ಎಸ್. ಗಂಗೊಳ್ಳಿಯವರು ಹೇಳಿದರು.
ಈ ಸಂದರ್ಭದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿತಂದ ಪ್ರಾಕ್ತನ ವಿದ್ಯಾರ್ಥಿಗಳಾದ ಅಂ. ಗಣೇಶ್ ಶೆಟ್ಟಿ ಮತ್ತು ಕಿರಣ್ ಶೆಟ್ಟಿ ಅಒಂ ರವರನ್ನು ಸನ್ಮಾನಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿಯವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿಯವರು ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಭಟ್ ಪ್ರಾಸ್ತಾವಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪೂಜಾ ಮತ್ತು ಶ್ರೀಮತಿ ಜೊಸ್ಲಿನ್ ಆರ್. ಅಲ್ಮೇಡಾ ಅತಿಥಿಗಳನ್ನು ಪರಿಚಯಿಸಿದರು. ಶ್ರೀ ರಾಜೇಶ್ ಶೆಟ್ಟಿ ವಂದಿಸಿ, ಶ್ರೀ ಸುಧೀರ್ ಕುಮಾರ್ ನಿರೂಪಿಸಿದರು. ತೃತೀಯ ಬಿ.ಕಾಂ. ವಿದ್ಯಾರ್ಥಿ ಗುರುರಾಜ್ ಪ್ರಾರ್ಥಿಸಿದರು.