ಗಂಗೊಳ್ಳಿ :ಹೊಸಾಡು ಗ್ರಾಮದ ಎಕ್ಸೆಲ್ ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ದಾಟಲು ನಿಂತಿದ್ದ ನಾಗೇಶ್ ಪೂಜಾರಿ ಎಂಬುವರಿಗೆ ಕಾರುಡಿಕ್ಕಿಯಾಗಿ ಮೃಪಟ್ಟಿದ್ದಾರೆ ತ್ರಾಸಿ ಕಡೆಯಿಂದ ಕುಂದಾಪುರದ ಕಡೆಗೆ ಹೋಗುತ್ತಿದ್ದ ಕಾರುಡಿಕ್ಕಿ ಹೊಡೆದ ಪರಿಣಾಮ ನಾಗೇಶ್ ಪೂಜಾರಿಯವರು ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನವಾಗಲಿಲ್ಲ ಕಾರು ಚಾಲಕ ಸ್ಟ್ಯಾನಿ ಡಿಸಿಲ್ವ ಅತಿ ವೇಗ ಮತ್ತು ಅಜಾಗರೂಕತೆ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ