ಕುಂದಾಪುರ: ಕಳೆದ 30 ವರ್ಷಗಳಿಂದ ಬಿಜೆಪಿಯ ಕಾರ್ಯಕರ್ತನಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ 220 ಬೂತ್ ಗಳ ಕಾರ್ಯಕರ್ತರ ಒಡನಾಡಿಯಾಗಿ ಮತದಾರರೊಂದಿಗೆ ಉತ್ತಮವಾದ ಬಾಂಧವ್ಯ ಹೊಂದಿದ್ದು ಯಾವುದೇ ಹುದ್ದೆಗಳಿಗೆ ಆಕಾಂಕ್ಷೆ ಪಡದೆ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಜೊತೆಯಲ್ಲಿ ಕಾರ್ಯಕರ್ತನಾಗಿ ಕೆಲಸ ಮಾಡಿದ್ದ ಪ್ರಸ್ತುತ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾದ ಶ್ರೀಯುತ ಕಿರಣ್ ಕುಮಾರ್ ಕೊಡ್ಗಿ ಅವರು ಓರ್ವ ಹೃದಯವಂತ ವ್ಯಕ್ತಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಬಿ ಕಿಶೋರ್ ಕುಮಾರ್ ನುಡಿದರು
ಕುಂದಾಪುರದ ವ್ಯಾಸರಾಜ ಮಠದಲ್ಲಿ ಇಂದು ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿ ಕಿಶೋರ್ ಕುಮಾರ್ ಅವರು ಇನ್ನುಳಿದ ದಿನಗಳಲ್ಲಿ ಕಾರ್ಯಕರ್ತರು ಉತ್ಸಾಹವನ್ನು ಕಳೆದುಕೊಳ್ಳದೆ ಕಿರಣ್ ಕುಮಾರ್ ಕೊಡ್ಗಿ ಇವರ ಗೆಲುವಿಗಾಗಿ ಅವಿರತ ಶ್ರಮಿಸಬೇಕೆಂದು ಕರೆಕೊಟ್ಟರು.