ಕುಂದಾಪುರ:ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮ ಜರಗಿತು.ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿ ಇಂಡಿಯನ್ ರೆಡ್ ಕ್ರಾಸ್ ಘಟಕದ ಸಭಾಪತಿಗಳಾದ ಶ್ರೀ ಜಯಕರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ದೇಶಿಸಿ ಯುವ ರೆಡ್ ಕ್ರಾಸ್ ಘಟಕದಲ್ಲಿ ಸ್ವಯಂ ಸೇವೆಯ ಮಹತ್ವ ಹಾಗೂ ಅದರ ಕರ್ಯವೈಖರಿಯ ಬಗ್ಗೆ ವಿದ್ಯರ್ಥಿಗಳಿಗೆ ಸವಿವರವಾಗಿ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾಲೇಜು ವಿದ್ಯರ್ಥಿಗಳಲ್ಲಿ ಶಿಕ್ಷಣದ ಜೊತೆಯಲ್ಲಿ ಸೇವಾ ಮನಸ್ಸು ಅತ್ಯವಶ್ಯಕ ಎಂದು ವಿದ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಖಜಾಂಚಿಗಳಾದ ಶ್ರೀ ಶಿವರಾಮ್ ಶೆಟ್ಟಿ, ಆಯುಷ್ದಾಮ ಆಸ್ಪತ್ರೆ ಕುಂದಾಪುರದ ವೈದ್ಯಕೀಯ ಅಧೀಕ್ಷಕರಾದ ಡಾ| ಸೋನಿ ಡಿ’ಕೋಸ್ಟ ಉಪಸ್ಥಿತರಿದ್ದರು. ಕಾಲೇಜು ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ ಸ್ವಾಗತಿಸಿ, ಪ್ರಾಸ್ತಾವಿಸಿದರು. ಯುವ ರೆಡ್ ಕ್ರಾಸ್ ಘಟಕದ ಸಂಯೋಜಕಿ ಶ್ರೀಮತಿ ಅವಿತಾ ಕೊರೆಯ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಪೂಜಾ ಕಾರ್ಯಕ್ರಮ ನಿರೂಪಿಸಿದರು.