Home » ಕಾಲೇಜು ವಾರ್ಷಿಕೋತ್ಸವ
 

ಕಾಲೇಜು ವಾರ್ಷಿಕೋತ್ಸವ

by Kundapur Xpress
Spread the love

ಕುಂದಾಪುರ: ಶ್ರೀ ಶಾರದಾ ಕಾಲೇಜು, ಬಸ್ರೂರು ಇದರ ಕಾಲೇಜು ವಾರ್ಷಿಕೋತ್ಸವ  ಜರುಗಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಮಾನ್ಯ ಉಪಕುಲಪತಿಗಳಾದ ಡಾ.ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶಾರದಾ ಕಾಲೇಜಿಗೆ ತನ್ನದೇ ಆದ ಚಾರಿತ್ರ್ಯ ಹೊಂದಿದ್ದು, ಒಂದು ಶಿಕ್ಷಣ ಸಂಸ್ಥೆ 50 ವರ್ಷಗಳ ಕಾಲ ನಡೆಸಿಕೊಂಡು ಹೋಗುವುದು ಶ್ಲಾಘನೀಯವಾಗಿದ್ದು, ಇಂದಿನ ಎನ್.ಇ.ಪಿ ಪಠ್ಯಕ್ರಮಕ್ಕೆ ಹೊಂದಿಕೊಳ್ಳಬೇಕಾಗಿದೆ. ಶಿಕ್ಷಣದ ಜೊತೆಗೆ ಸಂಸ್ಕಾರ ರೂಪಿಸುವುದರ ಮೂಲಕ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆ ಮತ್ತು ಆತ್ಮವಿಶ್ವಾಸದಿಂದ ವಿದ್ಯಾರ್ಥಿಗಳ ಬದುಕನ್ನು ಕಟ್ಟಿಕೊಡುವ ಕೆಲಸ ಎನ್.ಇ.ಪಿಯಲ್ಲಿ ಅವಕಾಶವಿದೆ ಎಂದರು. ವಿದ್ಯಾರ್ಥಿಗಳು ಸಕರಾತ್ಮಕ ಮತ್ತು ಧನಾತ್ಮಕ ಚಿಂತನೆ ಮೈಗೂಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ವಿಶ್ವಸ್ಥ ಮಂಡಳಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಮಾತನಾಡಿ ಬಸ್ರೂರು ನಂತಹ ಗ್ರಾಮೀಣ ಪ್ರದೇಶದಲ್ಲಿ ಪದವಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಸ್ಥಾಪಿಸಿ ಈ ಪ್ರದೇಶದಲ್ಲಿ ಶೈಕ್ಷಣಿಕ ಪರಂಪರೆಗೆ ನಾಂದಿ ಹಾಡಿದ ಮಹನೀಯರು ಇಂದಿಗೂ ಸ್ಮರಣೀಯ ಎಂದರು. ಕಾಲೇಜಿನ ಸಂಚಾಲಕರಾದ ಶ್ರೀ ಅಪ್ಪಣ್ಣ ಹೆಗ್ಡೆ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಚಂದ್ರಾವತಿ ಶೆಟ್ಟಿ ಕಾಲೇಜು ವಾರ್ಷಿಕ ವರದಿ ವಾಚಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ್ ಸಿ ಕುಂದರ್ ಕಾರ್ಯಕ್ರಮನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಟ್ರಸ್ಟಿ ಅಧ್ಯಕ್ಷರಾದ ಕೆ.ಜಯಕರ ಶೆಟ್ಟಿ, ಪ್ರಶಾಂತ್ ತೋಳಾರ್, ಗಣೇಶ್ ಕಾಮತ್, ಗಣೇಶ್ ಶೆಟ್ಟಿ, ಅನುಪಮಾ ಎಸ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಮ್ ಕಿಶನ್ ಹೆಗ್ಡೆ ಮತ್ತು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೈ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತರಾದ ಬೋಧಕೇತರ ಸಿಬ್ಬಂದಿ ಬಿ. ವಿಜಯಲಕ್ಷ್ಮಿ ಹಾಗೂ ಪಿ.ಹೆಚ್.ಡಿ ಪದವಿ ಪಡೆದ ಡಾ.ವಿಶ್ವನಾಥ ಆಚಾರ್ಯರವರನ್ನು ಸನ್ಮಾನಿಸಲಾಯಿತು. ಹಾಗೂ ಶೈಕ್ಷಣಿಕ ಹಾಗೂ ಕ್ರೀಡಾ ವಿಭಾಗದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಗುರುತಿಸಲಾಯಿತು. ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀ ಪುರುಷೋತ್ತಮ ಬಲ್ಯಾಯ ಧನ್ಯವಾದ ಗೈದರು.

   

Related Articles

error: Content is protected !!