ಕುಂದಾಪುರ : ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಮೇಲೆ ಮತದಾರರು ವಿಶ್ವಾಸವಿಟ್ಟು ಅವರ ಆಶಯದಂತೆ ಬಿ ಜೆ ಪಿಯ ಸಾಮಾನ್ಯ ಕಾರ್ಯಕರ್ತ ಹಾಗೂ ಅಭ್ಯರ್ಥಿಯಾದ ಕಿರಣ್ ಕುಮಾರ್ ಕೊಡ್ಗಿಯವರನ್ನು ಅಭೂತಪೂರ್ವವಾಗಿ ಮತದಾರರು ಗೆಲ್ಲಿಸಿ ನೂತನ ಶಾಸಕರನ್ನಾಗಿ ಆಯ್ಕೆ ಮಾಡಿದ್ದಾರೆ ಹಾಗಾಗಿ ಮತದಾರರಿಗೆ ಕೃತಜ್ಞತೆ ಅರ್ಪಿಸುವುದು ಬಿಜೆಪಿಯ ಆದ್ಯ ಕರ್ತವ್ಯ ವಾಗಿದೆ ಈ ನಿಟ್ಟಿನಲ್ಲಿ ಮೇ 19 ರಂದು ಶುಕ್ರವಾರ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಮತದಾರರಿಗೆ ಕೃತಜ್ಞತೆ ಮತ್ತು ನೂತನ ಶಾಸಕರಿಗೆ ಅಭಿನಂದನೆಯನ್ನು ಸಲ್ಲಿಸಲಾಗುವುದು ಎಂದು ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷರಾದ ಶಂಕರ್ ಅಂಕದಕಟ್ಟೆ ತಿಳಿಸಿದ್ದಾರೆ
ಮೇ 19 ರಂದು ಸರಸ್ವತಿ ಕಲ್ಯಾಣ ಮಂಟಪದಲ್ಲಿ ಸಂಜೆ 3.30 ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಭಾಗನಹಿಸಲಿದ್ದಾರೆಂದು ಅವರು ಹೇಳಿದ್ದಾರೆ