ಉಡುಪಿ :ಉಡುಪಿ ಸರಕಾರಿ ಶಾಲೆಗಳು ಹೊಸ ಶೈಕ್ಷಣಿಕ ವರ್ಷದೊಂದಿಗೆ ಮೇ 31 ಬುಧವಾರ ಪುನರಾರಂಭಗೊಳ್ಳಲಿದ್ದು ಉಡುಪಿ ವಿಧಾನಸಭಾ ಕ್ಷೇತ್ರದ 72 ಸರಕಾರಿ ಶಾಲೆಗಳು ಮಕ್ಕಳ ಸ್ವಾಗತಕ್ಕೆ ಸಜ್ಜಾಗಿವೆ ಉಡುಪಿ ನಗರದ ಒಳಕಾಡು ಸರಕಾರಿ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 9.00 ಗಂಟೆಗೆ ಮಾನ್ಯ ಶಾಸಕರು ಪ್ರಾರಂಭೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ
ಎಲ್ಲಾ ಜನಪ್ರತಿನಿಧಿಗಳು ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಪೋಷಕ ಸಮಿತಿಯ ಸದಸ್ಯರು ಶಿಕ್ಷಣ ಪ್ರೇಮಿಗಳು ಸಂಬಂಧಿಸಿದ ಸಮೀಪದ ತಮ್ಮ ಶಾಲೆಗಳ ವ್ಯಾಪ್ತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಸಂಭ್ರಮ ಹೆಚ್ಚಿಸುವಂತೆ ಶಾಸಕರು ಮನವಿ ಮಾಡಿದ್ದಾರೆ
ಶಾಸಕರು ಪ್ರವರ್ತಕರಾಗಿರುವ ಪುಷ್ಪಾನಂದ ಫೌಂಡೇಶನ್ ವತಿಯಿಂದ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಉಡುಪಿ ವಿಧಾನಸಭಾ ವ್ಯಾಪ್ತಿಯ ಎಲ್ಲಾ ಸರಕಾರಿ ಶಾಲೆಯ ಸುಮಾರು 12000 ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿರುತ್ತಾರೆ ಎಂದು ಶಾಸಕರು ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ