Home » ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಗಾರ
 

ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಗಾರ

by Kundapur Xpress
Spread the love

ಕುಂದಾಪುರ: ಶ್ರೀ ಶಾರದಾ ಕಾಲೇಜು, ಬಸ್ರೂರು, ದಿನಾಂಕ 29-05-2023  ರಂದು ಕಾಲೇಜಿನ ಐಕ್ಯೂಎಸಿ ಮತ್ತು ವೃತ್ತಿ ಮಾರ್ಗದರ್ಶನ ಹಾಗೂ ನರೇನ್ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ಒಂದು ದಿನದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಗಾರ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಟ್ರಸ್ಟ್ ಸದಸ್ಯರಾದ ಅನುಪಮಾ ಎಸ್ ಶೆಟ್ಟಿ ವಿದ್ಯಾರ್ಥಿಗಳ ಕುರಿತು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಆತ್ಮವಿಶ್ವಾಸ ಬಹಳ ಮುಖ್ಯ ನಿಮ್ಮಲ್ಲಿ ನೀವೇ ಗೊಂದಲದ ವಾತಾವರಣ ಮಾಡಿಕೊಳ್ಳುವುದಕ್ಕಿಂತ ಸಕಾರಾತ್ಮಕ ಮನಸ್ಥಿತಿಯಿಂದ ನಿಮ್ಮ ಮೇಲೆ ನಿಮಗೆ ನಂಬಿಕೆ ಅತಿ ಅಗತ್ಯ ಎಂದರು. ಐಕ್ಯೂಎಸಿ ಘಟಕದ ಸಂಯೋಜಕರಾದ ಪ್ರೊ. ಪುರುಷೋತ್ತಮ ಬಲ್ಯಾಯ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ನರೇನ ಅಕಾಡೆಮಿಯ ಚಂದ್ರಕಾAತ್ ವಿ. ಚಾಂತರ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರಂಜಿನಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ನರೇನ ಅಕಾಡೆಮಿಯ ಚಂದ್ರಕಾAತ್ ವಿ. ಚಾಂತರ, ಅರ್ಥಶಾಸ್ತ್ರ ಉಪನ್ಯಾಸಕ ಕಿಶನ್ ಹಾಗೂ ಲಕ್ಷ್ಮೀ  ಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕರಾದ ಮನೋಹರ ಉಪ್ಪುಂದ ಉಪಸ್ಥಿತರಿದ್ದರು. ವೃತ್ತಿ ಮಾರ್ಗದರ್ಶನ ಘಟಕ ಸಂಯೋಜಕರಾದ ಡಾ. ವಿಶ್ವನಾಥ ಆಚಾರ್ಯ ವಂದಿಸಿದರು.

 

 

   

Related Articles

error: Content is protected !!