ಕುಂದಾಪುರ : ಇಂದು ಬೆಳಿಗ್ಗೆ ಮಾಜಿ ಸಂಸದರಾದ ಜಯಪ್ರಕಾಶ್ ಹೆಗ್ಡೆಯವರು ರಾಜ್ಯದ ಉಪ ಮುಖ್ಯಮಂತ್ರಿಯಾದ ಡಿ ಕೆ ಶಿವಕುಮಾರ್ ರವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕೂತುಹಲಕ್ಕೆ ಎಡೆಮಾಡಿದೆ
ಈ ಬಗ್ಗೆ ಜಯಪ್ರಕಾಶ್ ಹೆಗ್ಡೆಯವರೊಂದಿಗೆ ಮಾತನಾಡಿದಾಗ ನಾನು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷನ ನೆಲೆಯಲ್ಲಿ ಉಪ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಚರ್ಚಿಸಿದ್ದೇನೆ ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ನವಂಬರ್ 26 ರ ವರೆಗೆ ನನ್ನ ಅಧಿಕಾರವದಿ ಇದ್ದು ಅಲ್ಲಿಯವರೆಗೆ ಯಾವುದೇ ರಾಜಕೀಯ ಚರ್ಚೆ ಮಾಡುವುದಿಲ್ಲ ಎಂದರು