ಕುಂದಾಪುರ : ರಾಜ್ಯ ಸರಕಾರದ ಶಕ್ತಿ ಯೋಜನೆಯ ಚಾಲನೆಗಾಗಿ ಉಡುಪಿಗೆ ಆಗಮಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗು ಜಿಲ್ಲಾ ಉಸ್ತುವಾರಿ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಜಿಲ್ಲೆಯ ಬಿಜೆಪಿ ಶಾಸಕರು ಉಡುಪಿಯ ಸರಕಾರಿ ಅತಿಥಿ ಗೃಹದಲ್ಲಿ ಭೇಟಿಮಾಡಿ ವಿವಿಧ ವಿಷಯಗಳ ಬಗ್ಗೆ ಮಾತುಕತೆ ನಡೆಸಿದರು
ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಕಾಪು ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಯವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅಭಿನಂದಿಸಿ ಆನಂತರ ತಮ್ಮ ಕ್ಷೇತ್ರದ ಹಲವು ವಿಷಯ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿ ವಿಷಯಗಳ ಬಗ್ಗೆ ಕೆಲವು ಕಾಲ ಚರ್ಚೆ ನಡೆಸಿದರು