Home » ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ
 

ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ

by Kundapur Xpress
Spread the love

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಸೋತಿದ್ದರೂ ಉಡುಪಿ ಜಿಲ್ಲೆಯಲ್ಲಿ ಐದೂ ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಮಸ್ತ ಕಾರ್ಯಕರ್ತರ ಸಾಧನೆ ಅಭಿನಂದನೀಯ. ಪ್ರಸಕ್ತ ಚುನಾವಣೆಯ ಅವಲೋಕನದ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮಗದೊಮ್ಮೆ ದೇಶದ ಪ್ರಧಾನಿಯನ್ನಾಗಿಸಲು ಸಂಘಟಿತರಾಗಿ ಶ್ರಮಿಸೋಣ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯನ್ನುದ್ದೇಶಿಸಿ ಮಾತನಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಅಲ್ಪಸಂಖ್ಯಾತರ ದರ್ಪ ಹೆಚ್ಚುತ್ತಿದೆ. ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟಗಳು ಅಗತ್ಯವಾಗಿದೆ ಎಂದರು. ಕೊರೋನ ಸವಾಲಿನ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಪ್ರಗತಿಯ ಪಥದಲ್ಲಿ ಸಾಗುತ್ತಿದ್ದು ಆರ್ಥಿಕ ಸಾಧನೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನದಲ್ಲಿದೆ. ವಿವಿಧ ಕ್ಷೇತ್ರಗಳ ಸಾಧನೆಗಳ ಜೊತೆಗೆ ಮುಂದಿನ ಎರಡು ಮೂರು ವರ್ಷಗಳಲ್ಲಿ 3ನೇ ಸ್ಥಾನವನ್ನು ತಲುಪುವ ಗುರಿಯೊಂದಿಗೆ ಭಾರತ ವಿಶ್ವದ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ. ಭಾರತ ಇಂದು ವಿಶ್ವದೆಲ್ಲೆಡೆ ವಿಶೇಷ ಗೌರವಕ್ಕೆ ಪಾತ್ರವಾಗುತ್ತಿದೆ.

ಜನಸಂಘದ ಕಾಲದಲ್ಲೇ ವಿಶೇಷ ಸಾಧನೆ ಮೂಲಕ ದೇಶದಲ್ಲಿ ಹೆಸರುವಾಸಿಯಾಗಿದ್ದ ಉಡುಪಿ ಜಿಲ್ಲೆ ಮಗದೊಮ್ಮೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ 100% ಫಲಿತಾಂಶದೊಂದಿಗೆ ತಲೆ ಎತ್ತಿ ನಿಂತಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ದೇಶಕ್ಕೆ ಸಮರ್ಥ ನೇತೃತ್ವ ನೀಡುವ ನಿಟ್ಟಿನಲ್ಲಿ ನರೇಂದ್ರ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಲು ಎಲ್ಲರೂ ಪಣ ತೊಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಶಾಸಕರಾದ ವಿ.ಸುನೀಲ್ ಕುಮಾರ್ ಕಾರ್ಕಳ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ಗುರುರಾಜ್ ಗಂಟಿಹೊಳಿ ಬೈಂದೂರು, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ಉಮೇಶ್ ಎ. ನಾಯ್ಕ್, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿಪ್ರಸಾದ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಹಾಗೂ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಚಾಲಕರು ಉಪಸ್ಥಿತರಿದ್ದರು

   

Related Articles

error: Content is protected !!