ಮಂಗಳೂರು : ಮಂಗಳೂರು ನಗರದ ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಭಂದಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು ಅವರಿಂದ ಒಂದು ಕೆಜಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ
ಜನವರಿ 15 ರಂದು ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಐಕಳ ಹರೀಶ್ ಶೆಟ್ಟಿ ಎಂಬವರ ಚಂದ್ರಿಕಾ ಎಂಬ ಹೆಸರಿನ ಮನೆ ಬಾಗಿಲ ಲಾಕ್ ನ್ನು ಯಾರು ಕಳ್ಳರು ಮುರಿದು ಮನೆಯಲ್ಲಿದ್ದ ಚಿನ್ನಾಭರಣ ಬೆಳ್ಳಿ ಆಭರಣ ಹಾಗೂ ನಗದು ಹಣವನ್ನು ಕಳವುಗೈದಿದ್ದರು ಈ ಪ್ರಕರಣದ ತನಿಖೆಯನ್ನು ನಗರದ ಅಪರಾಧ ವಿಭಾಗ ಸಿಸಿಬಿ ಗೆ ಹಸ್ತಾಂತರಿಸಲಾಗಿತ್ತು
ಈ ಕ್ಲಿಷ್ಟಕರವಾದ ಹಾಗೂ ಯಾವುದೇ ಸುಳಿಯು ಇಲ್ಲದ ಪ್ರಕರಣದ ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಮಾಹಿತಿಯನ್ನು ಸಂಗ್ರಹಿಸಿ ಚಾಣಾಕ್ಷತನದಿಂದ ಪ್ರಕರಣವನ್ನು ಭೇದಿಸಿ ಈ ಪ್ರಕರಣದಲ್ಲಿ ಭಾಗಿಯಾದ ಕೊಡಗಿನ ವಿರಾಜಪೇಟೆಯ ಹಳೇ ಸಿದ್ದಾಪುರದ ರಂಜಿತ್ ಕೆ ಆರ್ ಹಾಗೂ ಕಾರ್ಕಳದ ಗಣೇಶ್ ನಾಯ್ಕ್ ಎಂಬಾತವನ್ನು ಪೊಲೀಸರು ಬಂಧಿಸಿದ್ದಾರೆ
ಆರೋಪಿಗಳಿಂದ ಒಂದು ಕೆಜಿ ವಿವಿಧ ನಮೂನೆಯ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ವಶಪಡಿಸಿಕೊಂಡ ಚಿನ್ನಾಭರಣಗಳ ಒಟ್ಟು ಮೌಲ್ಯ 55 ಲಕ್ಷ ಎಂದು ಅಂದಾಜಿಸಲಾಗಿದೆ ಅಲ್ಲದೆ ಆರೋಪಿಗಳಿಂದ ಎರಡು ಮೊಬೈಲ್ ಫೋನ್ ಹಾಗೂ ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡ್ ವಶಪಡಿಸಿಕೊಳ್ಳಲಾಗಿದೆ ಆರೋಪಿಗಳ ಪೈಕಿ ಗಣೇಶ್ ನಾಯ್ಕ್ ಎಂಬಾತನ ವಿರುದ್ಧ ಈ ಹಿಂದೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುತ್ತದೆ
ಈ ಕಳವು ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ನಗರ ಸಿಸಿಬಿ ಘಟಕದ ಎಸಿಪಿ ಪಿ ಏ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿ ಎಸ್ ಐಯವರಾದ ರಾಜೇಂದ್ರ ಬಿ,ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ಎಎಸ್ಐಯವರಾದ ಶಶಿಧರ ಶೆಟ್ಟಿ, ಹರೀಶ್,ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು