ಉಡುಪಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 9 ವರ್ಷಗಳ ಜನಪರ ಆಡಳಿತವನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮೋದಿ ಸರಕಾರದ ಸಾಧನೆಗಳನ್ನು ಜನಮಾನಸದಲ್ಲಿ ಪ್ರಚಲಿತಗೊಳಿಸುವ ಜೊತೆಗೆ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ 1 ತಿಂಗಳ ಕಾಲ ರಾಜ್ಯಾದ್ಯಂತ ಬಿಜೆಪಿ ಜಿಲ್ಲಾ ಸಮಾವೇಶಗಳು ನಡೆಯಲಿವೆ.
ಬಿಜೆಪಿ ಉಡುಪಿ ಜಿಲ್ಲಾ ಸಮಾವೇಶವು ಜೂ.22, ಗುರುವಾರ ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರ್ ನ ಶೇಷಶಯನ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಬಿಜೆಪಿ ಜಿಲ್ಲಾ ಸಮಾವೇಶದಲ್ಲಿ ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲೆಯ ಶಾಸಕರುಗಳಾದ ವಿ.ಸುನೀಲ್ ಕುಮಾರ್, ಸುರೇಶ್ ಶೆಟ್ಟಿ ಗುರ್ಮೆ, ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ ಸಹಿತ ಪಕ್ಷದ ಮುಖಂಡರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.