Home » ಆಕಾಶ, ಭೂಮಿ, ಪಾತಾಳದಲ್ಲಿ ಕಾಂಗ್ರೆಸ್ ಹಗರಣ
 

ಆಕಾಶ, ಭೂಮಿ, ಪಾತಾಳದಲ್ಲಿ ಕಾಂಗ್ರೆಸ್ ಹಗರಣ

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ

by Kundapur Xpress
Spread the love

ಉಡುಪಿ: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಅಧಿಕಾರದಲ್ಲಿದ್ದಾಗ ಆಕಾಶ, ಭೂಮಿ, ಪಾತಾಳದಲ್ಲೂ ಹಗರಣಗಳನ್ನು ನಡೆಸಿತ್ತು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಬೆಲೆ ಏರಿಕೆಯ ಮೂಲಕ ಕಾಂಗ್ರೆಸ್ ಜನರಿಗೆ ಮಹಾ ಮೋಸ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವಾಗ್ದಾಳಿ ನಡೆಸಿದರು.

ಅವರು ಜೂ.22ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಉಡುಪಿಯ ಹೋಟೆಲ್ ಕಿದಿಯೂರು ಶೇಷಶಯನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಉಡುಪಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಸದ್ದಿಲ್ಲದೆ ಬೆಲೆ ಏರಿಕೆಗೆ ಮುಂದಾಗಿದ್ದು ವಿದ್ಯುತ್ ಹಾಗೂ ಮದ್ಯದ ದರ ಹೆಚ್ಚಿಸಿದೆ. ಮುಂದೆ ನೋಂದಣಿ ಶುಲ್ಕ ಹೆಚ್ಚಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ವಾಗ್ದಾಳಿ ನಡೆಸಿದರು.ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ ರಾಜ್ಯದಲ್ಲೇ ಜಿಲ್ಲೆಯ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಉಡುಪಿ ಜಿಲ್ಲೆ ರಾಜ್ಯದಲ್ಲಿ ಮುಂಚೂಣಿ ಸ್ಥಾನ ಪಡೆಯಲು ಶ್ರಮಿಸಿರುವ ಸಮಸ್ತ ಕಾರ್ಯಕರ್ತರಿಗೆ ಅಭಿನಂದನೆಗಳು. ಇದೇ ರೀತಿಯ ಸ್ಪೂರ್ತಿಯಿಂದ ಮುಂದಿನ ತಾ.ಪಂ., ಜಿ.ಪಂ. ಸಹಿತ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಭರ್ಜರಿ ಗೆಲುವಿಗೆ ಕಂಕಣಬದ್ಧರಾಗಿ ಶ್ರಮಿಸೋಣ ಎಂದರು.

ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯ, ಬಿಜೆಪಿ ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕರಾದ ಯಶ್ಪಾಲ್ .ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಉಪಸ್ಥಿತರಿದ್ದರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ ಸ್ವಾಗತಿಸಿ, ಸದಾನಂದ ಉಪ್ಪಿನಕುದ್ರು ಮತ್ತು ಮನೋಹರ್ ಎಸ್. ಕಲ್ಮಾಡಿ ನಿರೂಪಿಸಿದರು. ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ವಂದಿಸಿದರು

   

Related Articles

error: Content is protected !!