ಕುಂದಾಪುರ : ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ರಚನೆಯನ್ನು ಮಾಡಿ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಿಲಾಯಿತು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಕಾಂತರಾಜು ಸಿ.ಎಸ್ರವರು ಆಗಮಿಸಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿ ಪದಗ್ರಹಣವನ್ನು ನೆರವೇರಿಸಿದರು. ವಿಧ್ಯಾರ್ಥಿ ನಾಯಕರನ್ನು ಅಭಿನಂದಿಸಿ ಉತ್ತಮ ನಾಯಕತ್ವವನ್ನು ನಡೆಸಲು ಶಿಸ್ತು ಪಾಲನೆ ಬಹುಮುಖ್ಯ ಅಂಶವೆಂದು ತಿಳಿಸಿದರು. ಗುರು ಹಿರಿಯರಿಗೆ, ತಂದೆ ತಾಯಿಗಳಿಗೆ ವಿಧೇಯರಾಗಿದ್ದು ಅವರ ಮಾರ್ಗದರ್ಶನದಲ್ಲಿ ಮುನ್ನಡೆದರೆ ಜೀವನದಲ್ಲಿ ಯಶಸ್ಸು ಗಳಿಸಬಹುದೆಂದು ತಿಳಿಸಿದರು. ಪ್ರತಿಯೊಂದು ಸೋಲು ಗೆಲುವುಗಳಿಂದ ಪಾಠವನ್ನು ಕಲಿತು ಬದುಕನ್ನು ಮುನ್ನಡೆಸಿಕೊಂಡು ಹೋಗುವವನೇ ನಿಜವಾದ ನಾಯಕನಾಗಲು ಅರ್ಹ ಎಂದು ತಿಳಿಸಿ ಇತರರನ್ನು ಮುನ್ನಡೆಸಿ ಮುನ್ನಡೆಯುವುದೇ ನಾಯಕತ್ವ ಎಂದು ನುಡಿದರು ಪ್ರತೀಯೊಬ್ಬರಿಗೂ ಈ ದೇಶದ ಸಂವಿಧಾನ ಹಾಗೂ ಕಾನೂನಾತ್ಮಕ ಅರಿವು ಮೂಡಿಸಬೇಕು ಎಂದು ತಿಳಿಸಿದೆ ಅವರು ವಿದ್ಯಾರ್ಥಿಯ ಜೀವನದಲ್ಲಿ ಶಿಸ್ತನ್ನು ಕಲಿಯಲು ಮೊದಲು ಕುಟುಂಬ ನಂತರ ಶಾಲೆ ಹಾಗೂ ಸಮಾಜದ ಪಾತ್ರ ಬಹಳ ಮುಖ್ಯವಾಗಿದೆ ಎಂದು ಹೇಳಿದರು ಪೋಷಕರು ಹಾಗೂ ಶಿಕ್ಷಕರು ಮಗುವಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡಿ ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ನೀಡಬೇಕೆಂದು ಕರೆಯಿತ್ತರು
ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ. ಎಮ್. ಪ್ರಭಾಕರ ಶೆಟ್ಟಿಯವರು ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು, ಶಾಲಾ ಪ್ರಾಂಶುಪಾಲ ನಿತಿನ್ ಡಿ’ ಆಲ್ಮೆಡಾ ಮತ್ತು ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿನಾಯಕನಾಗಿ ವರ್ಷಿತ್ ಶೆಟ್ಟಿ ಹಾಗೂ ಉಪನಾಯಕಿಯಾಗಿ ಕೀರ್ತನಾ ಶೆಟ್ಟಿ ಆಯ್ಕೆಯಾದರು. ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾರವರು ಸ್ವಾಗತಿಸಿ ಪರಿಚಯಿಸಿದರು, ವಿದ್ಯಾರ್ಥಿಗಳಾದ ಸ್ನೇಹ ಕಾರ್ಯಕ್ರಮ ನಿರೂಪಿಸಿದರು, ಹರ್ಷಿಣಿ ವಂದಿಸಿದರು, ಶಿಕ್ಷಕಿಯರಾದ ಅಕ್ಷತಾ ಶೆಟ್ಟಿ ಹಾಗೂ ಪ್ರಜ್ಞಾ ಕಾಮತ್ರವರು ಕಾರ್ಯಕ್ರಮ ಸಂಘಟಿಸಿದರು.