ಮಂಗಳೂರು :ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೊಂದೇಲ್ ಪರಿಸರದಲ್ಲಿ ವ್ಯಕ್ತಿಯೊಬ್ಬರನ್ನು ಹಣಕ್ಕಾಗಿ ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ 7 ಮಂದಿ ಆರೋಪಿಗಳನ್ನು ಬಂಧಿಸಿ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಆರೋಪಿಗಳ ಪೈಕಿ ಸುರೇಂದ್ರ ಎಂಬಾತನ ವಿರುದ್ಧ ಈ ಹಿಂದೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಮಂಗಳೂರು ಪೂರ್ವ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಇನ್ನೋರ್ವ ಆರೋಪಿ ಕಿಶೋರ್ ಎಂಬಾತನ ವಿರುದ್ಧ ಈ ಹಿಂದೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದ್ದರೆ ಸುಶಾಂತ್ ಎಂಬಾತನ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.