341
ಮಣಿಪಾಲ : ಮಣಿಪಾಲ ಸಮೀಪದ ಹಾಟ್ ಎಂಡ್ ಸ್ಪೈಸಿ ಹೊಟೇಲ್ ಎದುರುಗಡೆಯ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಯುವ ವೈದ್ಯರೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ
ಮಣಿಪಾಲದ ಕೆ ಎಂ ಸಿ ಅಸ್ಪತ್ರೆಯಲ್ಲಿ ಮೂಳೆ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದ ಡಾಕ್ಟರ್ ಸೂರ್ಯನಾರಾಯಣ ಯಾನೆ ಡಾ. ಸೂರಿ ಎಂದು ಗುರುತಿಸಲಾಗಿದೆ
ಹೋಟೆಲ್ ಎದುರುಗಡೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರು ಮೊದಲು ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆದು ನಂತರ ಮೂರು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ ಕಾರಿನಲ್ಲಿ ಮತ್ತಿಬ್ಬರು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ