ಕುಂದಾಪುರ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೈನ್ ಮ್ಯಾನ್ ಒರ್ವರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೈಂದೂರಿನಲ್ಲಿ ನಿನ್ನೆ ನಡೆದಿದೆ. ಬೈಂದೂರು ಮೆಸ್ಕಾಂ ಲೈನ್ ಮ್ಯಾನ್ ರಮೇಶ್ ಬಡಿಗೇರ ಎಂಬವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ
ಬೈಂದೂರಿನ ಕುಸುಮಾ ಎಂಬವರು ಮರ ಕಡಿಯಲು ವಿದ್ಯುತ್ ಲೈನ್ ಕಟ್ ಮಾಡಿಕೊಡುವಂತೆ ಮನವಿ ಮಾಡಿದ್ದ ವೇಳೆ ಲೈನ್ ಮ್ಯಾನ್ ರಮೇಶ್ ಬಡಿಗೇರ ಅವರು 2000 ರೂಪಾಯಿಯ ಲಂಚದ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕುಸುಮಾ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಲೋಕಾಯುಕ್ತ ಡಿವೈಎಸ್ ಪಿ ಪ್ರಕಾಶ್, ಇನ್ಸ್ಪೆಕ್ಟರ್ ಜಯರಾಮ್ ಗೌಡ ತಂಡ ಕಾರ್ಯಾಚರಣೆ ನಡೆಸಿದ್ದಾರೆ ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್,ಸತೀಶ್ ಮಲ್ಲಿಕಾ,ರೋಹಿತ್, ರಾಘವೇಂದ್ರ, ಪ್ರಸನ್ನ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ರಮೇಶ್,ಸತೀಶ್ ಆಚಾರಿ,ರಾಘವೇಂದ್ರ ಹೊಸಕೋಟೆ,ಸೂರಜ್, ಸುಧೀರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು