ಕುಂದಾಪುರ : ವಿಶ್ವ ಹಿಂದು ಪರಿಷತ್ ನ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಯವರು ನಿನ್ನೆ ಹ್ರದಯಾಘಾತದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದ್ದು ಅವರ ನಿಧನಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂಸೇವಕರಾದ ಕೇಶವ ಹೆಗಡೆಯವರು 1982 ನೇ ಇಸವಿಯಿಂದ ಸಂಘದ ಪೂರ್ಣಾವದಿ ಕಾರ್ಯಕರ್ತರಾಗಿ ಸಂಘದ ಪ್ರಚಾರಕರಾಗಿ ನಂತರ ವಿಶ್ವ ಹಿಂದು ಪರಿಷತ್ ಕ್ಷೇತ್ರಿಯ ಕಾರ್ಯದರ್ಶಿಯಾಗಿ ಸಕ್ರೀಯವಾಗಿ ಕೆಲಸ ಮಾಡುತ್ತಿದ್ದರು
ಸಂಘ ಪರಿವಾರ ಹಾಗೂ ವಿವಿಧ ರಾಜಕೀಯ ಮುಖಂಡರು ಚಾಮರಾಜಪೇಟೆಯ ಕೇಶವ ಶಿಲ್ಪದಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು