ಕುಂದಾಪುರ : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ‘ಟೈಮ್ ಫಾರ್ ನೇಚರ್’ ಎನ್ನುವ ಶೀರ್ಷಿಕೆಯಡಿಯಲ್ಲಿ ಅಂತರ್ ತರಗತಿ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಜುಲೈ ೦೪, ೨೦೨೩ರಂದು ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪರಿಸರ ಕಾಳಜಿಯ ಬಗ್ಗೆ ಹಾಗೂ ಅದರ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು.
ಅಂತರ್ ತರಗತಿ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರು ಪ್ರಥಮ ಬಿ.ಕಾಂ. ‘ಸಿ’ ವಿಭಾಗದ ವಿಘ್ನೇಶ್ವರ್ ಹಾಗೂ ನಶ್ಯಂತ್ ಇವರಿಗೆ ಸಸಿಯನ್ನು ಕೊಡುವ ಮೂಲಕ ಅಭಿನಂದಿಸಲಾಯಿತು. ತರಗತಿ ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೂ ಬಹುಮಾನವನ್ನು ವಿತರಿಸಲಾಯಿತು.
ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ವೀಣಾ ಭಟ್ ಪ್ರಾಸ್ತಾವಿಸಿದರು. ಕಾರ್ಯಕ್ರಮದ ಸಂಯೋಜಕಿ ಸುಶ್ಮಿತಾ ಸಾಲಿಗ್ರಾಮ ರಸಪ್ರಶ್ನೆ ಸ್ಪರ್ಧೆಯನ್ನು ೭ ಹಂತಗಳಲ್ಲಿ ನಡೆಸಿಕೊಟ್ಟರು.