ಕುಂದಾಪುರ : ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಬೇಳೂರು ಗ್ರಾಮದ ಮೊಗೆಬೆಟ್ಟುವಿನ ಬಳಿಯ ಬಾರ್ ಹಿಂಬಾಗದಲ್ಲಿ ಹಣವನ್ನು ಪಣವಾಗಿಟ್ಟು ಇಸ್ಪೀಟ್ ಆಡುತ್ತಿದ್ದ 13 ಮಂದಿಯನ್ನು ಪೊಲೀಸರು ಬಂಧಿಸಿ ಅವರಿಂದ ಅಂದರ್ ಬಾಹರ್ ಆಟಕ್ಕೆ ಬಳಸಿದ್ದ 1.09.355 ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ
ಖಚಿತ ಮಾಹಿತಿಯ ಮೇರೆಗೆ ಹಿರಿಯಡ್ಕ ಪಿ ಎಸ್ ಐ ಹಾಗೂ ಸಿಬ್ಬಂದಿಗಳೊಂದಿಗೆ ಬ್ರಹ್ಮಾವರ ನಿರೀಕ್ಷಕರು ದಾಳಿ ನಡೆಸಿದ್ದು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ