ಕುಂದಾಪುರ :ಮಾನಸಿಕವಾಗಿ ಅಸ್ವಸ್ಥಗೊಂಡು ಕೊಲ್ಲೂರಿನ ಕಾಡಿನಲ್ಲಿ ತಿರುಗಾಡುತ್ತಿದ್ದ ಕೇರಳ ಮೂಲದ ಅಪರಿಚಿತ ಯುವತಿಯನ್ನು ಮಂಗಳವಾರ ಸಮಾಜ ಸೇವಕ ವಿಶು ಶೆಟ್ಟಿಯವರು ಸ್ಥಳೀಯ ರಿಕ್ಷಾ ಚಾಲಕರು ಹಾಗೂ ಪೊಲೀಸರ ಸಹಾಯದಿಂದ ರಕ್ಷಿಸಿ ಮಂಜೇಶ್ವರದ ಮಾನಸಿಕ ಅಸ್ವಸ್ಥ ಪುನರ್ವಸತಿ ಕೇಂದ್ರ ಸ್ನೇಹಾಲಯಕ್ಕೆ ದಾಖಲಿಸಿದ್ದಾರೆ
ಯುವತಿ ತನ್ನ ಹೆಸರು ಅರ್ಚನಾ ಎಂದು ತಿಳಿಸಿದ್ದು ಹುಟ್ಟೂರು ಕೇರಳದ ಚರ್ವತ್ಕಲ್ ಎಂದು ಅಸ್ಪಷ್ಟ ಮಾಹಿತಿ ನೀಡಿದ್ದಾಳೆ ಈಕೆ ಕೊಲ್ಲೂರಿನ ಸಲಗೇರಿ ಬಳಿಯ ಅರಣ್ಯದಲ್ಲಿ ತಿರುಗಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹಾಗೂ ರಿಕ್ಷಾ ಚಾಲಕರು ಕೊಲ್ಲೂರು ಠಾಣೆಗೆ ಮಾಹಿತಿ ನೀಡಿದ್ದರು