ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದ್ದು, ನದಿಗಳು , ಹಳ್ಳಗಳು ,ತೋಡುಗಳು ತುಂಬಿ ಹರಿಯುತ್ತಿರುವ ಕಾರಣ, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕರು ಮತ್ತು ಜಿಲ್ಲೆಗೆ ಆಗಮಿಸುವ ಪ್ರವಾಸಿಗರು , ಬೀಚ್ ಗಳು, ನದಿಗಳು ಹಾಗು ಜಲಪಾತಗಳ ಬಳಿ ತೆರಳದಂತೆ ಹಾಗೂ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡುವುದನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.