Home » ಭಿತ್ತಿ ಚಿತ್ರ ಸ್ಪರ್ಧೆಯಲ್ಲಿ ಮದನ್ ಜಿಲ್ಲೆಗೆ ಪ್ರಥಮ
 

ಭಿತ್ತಿ ಚಿತ್ರ ಸ್ಪರ್ಧೆಯಲ್ಲಿ ಮದನ್ ಜಿಲ್ಲೆಗೆ ಪ್ರಥಮ

by Kundapur Xpress
Spread the love

ಕುಂದಾಪುರ : ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಇವರು ಉಡುಪಿ ಜಿಲ್ಲಾ ಅಂತರ್-ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಹೆಚ್‌ಐವಿ/ಏಡ್ಸ್ ಕುರಿತ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕ ಮದನ್ ಎಮ್.ವಿ. ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಬಿ.ಎಂ. ಸುಕುಮಾರ್ ಶೆಟ್ಟಿ, ಕಾಲೇಜು ಆಡಳಿತ ಮಂಡಳಿಯವರು, ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿಗಳು, ಕಾಲೇಜಿನ ಬೋಧಕ-ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

 

Related Articles

error: Content is protected !!