ಕುಂದಾಪುರದ : ಪದವಿ ಪೂರ್ವ ಶಿಕ್ಷಣ ಇಲಾಖೆ,ಕರ್ನಾಟಕ ಸರ್ಕಾರ ಮತ್ತು ಎಂ.ಜಿ.ಎಂ ಕಾಲೇಜು, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಣಿಪಾಲದಲ್ಲಿ ನಡೆದ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ 100ಮೀ. ಫ್ರೀ ಸ್ಟೈಲ್ ಈಜು ಸ್ಪರ್ಧೆಯಲ್ಲಿ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿ ಸೃಜನ್ ಜೆ.ಎಸ್ ಆಚಾರ್ಯ ದ್ವಿತೀಯ ಸ್ಥಾನಗಳಿಸಿರುತ್ತಾನೆ. ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿ,ಪ್ರಾಂಶುಪಾಲರು,ಬೋಧಕ-ಬೋಧಕೇತರ,ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.