Home » ಕರಾಟೆ ರಾಷ್ಟ್ರಮಟ್ಟದ ಸಾಧನೆಗೈದ ವಿದ್ಯಾರ್ಥಿಗಳು
 

ಕರಾಟೆ ರಾಷ್ಟ್ರಮಟ್ಟದ ಸಾಧನೆಗೈದ ವಿದ್ಯಾರ್ಥಿಗಳು

ಎಕ್ಸಲೆಂಟ್ ಕುಂದಾಪುರ

by Kundapur Xpress
Spread the love

ಕುಂದಾಪುರ  : ಎಕ್ಸಲೆಂಟ್ ಕುಂದಾಪುರ ವಿದ್ಯಾಸಂಸ್ಥೆಯು ಶಿಕ್ಷಣದ ಜೊತೆ ಜೊತೆಗೆ ಕ್ರೀಡೆ, ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ತನ್ನದೇ ಆಗಿರುವ ಹೊಸ ಚಾಪನ್ನು ಮೂಡಿಸಿಕೊಂಡು ಬಂದು ಕೇವಲ ತಾಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೇ ರಾಷ್ಟ್ರಮಟ್ಟದಲ್ಲೂ ಸಹ ತನ್ನ ವಿಜಯ ಪತಾಕೆಯನ್ನು ಹಾರಿಸಿದೆ. ದಿನಾಂಕ 19-10-2024ರಂದು ಭಟ್ಕಳದಲ್ಲಿ ನಡೆದ “ನ್ಯಾಶನಲ್ ಓಪನ್ ಚಾಂಪಿಯನ್‍ಶಿಪ್ ಕರಾಟೆ ಸ್ಪರ್ಧೆ”ಯಲ್ಲಿ ‘ಕುಮಟೆ’ ವಿಭಾಗದಲ್ಲಿ ಶಶಿಕಿರಣ್ ಬಿ.ಆರ್ ಪ್ರಥಮ ಸ್ಥಾನವನ್ನು ಮತ್ತು

‘ಕಾಟ’ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದು, ಮತ್ತೊಬ್ಬ ವಿದ್ಯಾರ್ಥಿಯಾದ ತೇಜಸ್ವಿ .ವಿ ‘ಕಾಟ’ ವಿಭಾಗದಲ್ಲಿ ಪ್ರಥಮ ಸ್ಥಾನ ಮತ್ತು ‘ಕುಮಟೆ’ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಎಕ್ಸಲೆಂಟ್ ಇತಿಹಾಸದಲ್ಲಿಯೇ ಹೊಸ ಅಧ್ಯಾಯದ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಇವರ ಈ ಅಮೋಘ ಸಾಧನೆಯನ್ನು ಗುರುತಿಸಿ ಈ ಹೆಮ್ಮೆಯ ವಿದ್ಯಾರ್ಥಿಗಳಿಗೆ ಎಮ್. ಎಮ್ ಹೆಗ್ಡೆ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ಎಮ್ ಮಹೇಶ್ ಹೆಗ್ಡೆ ಹಾಗೂ ಪ್ರಾಂಶುಪಾಲರು, ಉಪನ್ಯಾಸಕರು, ಮುಖ್ಯೋಪಾಧ್ಯಾಯರು, ಶಿಕ್ಷಕ-ಶಿಕ್ಷಕೇತರ ವರ್ಗದವರು ಅಭಿನಂದಿಸಿ, ಮುಂದೆ ನಡೆಯುವ ರಾಷ್ಟ್ರೀಯ ಮಟ್ಟದ ಕರಾಟೆಯಲ್ಲಿ ಜಯಶೀಲರಾಗಿ ಅಂತರಾಷ್ಟ್ರೀಯ ಮಟ್ಟದಲ್ಲೂ ವಿಜೇತರಾಗುವಂತೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.

 

Related Articles

error: Content is protected !!