ಕುಂದಾಪುರ : ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಗ್ರಾಮೀಣ ಪ್ರದೇಶದ ಅತ್ಯುನ್ನತ ಶಿಕ್ಷಣ ಸಂಸ್ಥೆಯಾಗಿ ಸಮಾಜದಲ್ಲಿ ಗುರುತಿಸಿಕೊಂಡ ಹೆಗ್ಗಳಿಕೆ ಈ ಸಂಸ್ಥೆಯದ್ದಾಗಿದೆ. ವಿದ್ಯಾರ್ಥಿಗಳ ಜೀವನದ ಆಶಾಕಿರಣವಾಗಿ ಈಡೀ ರಾಜ್ಯವೇ ಹೆಮ್ಮೆಯಿಂದ ಗುರುತಿಸಿದ ವಿದ್ಯಾಸಂಸ್ಥೆಯಾಗಿದೆ. ಕೇವಲ ಶಿಕ್ಷಣ ಮಾತ್ರವಲ್ಲದೆ ಸಾಂಸ್ಕ್ರತಿಕ, ಸಾಹಿತ್ಯ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಈಡೀ ರಾಷ್ಟ್ರವೇ ಗುರುತಿಸುವಂತಹ ಅದ್ಭುತ ಸಾಧನೆಯನ್ನು ಗಳಿಸಿದ ಹೆಮ್ಮೆಯ ಶಿಕ್ಷಣ ಸಂಸ್ಥೆಯಾಗಿದೆ. ಅಂತಹ ಸಾಧನೆಯ ಹಾದಿಯಲ್ಲಿ ಈ ನಮ್ಮ ಸಂಸ್ಥೆಗೆ ಇನ್ನೊಂದು ಹಿರಿಮೆಯ ಗರಿಯನ್ನು ಮೂಡಿಗೇರಿಸಿಕೊಂಡಿದೆ
ದಿನಾಂಕ 13-11-2024ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ ಮತ್ತು ರಾಘವೇಂದ್ರ ಹೈ-ಟೆಕ್ ಪದವಿ ಪೂರ್ವ ಕಾಲೇಜು ದಾವಣಗೆರೆ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜು ವಿಭಾಗದ ಬಾಲಕಿಯರ ಕರಾಟೆ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು, ಕುಂದಾಪುರದ ವಿದ್ಯಾರ್ಥಿನಿ ನವಮಿ ಎಸ್ ಶೆಟ್ಟಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯ – 65ಕೆ.ಜಿ ‘ಕುಮಟೆ’ ವಿಭಾಗದಲ್ಲಿ ವಿಜಯಶಾಲಿಯಾಗುವುದರ ಮೂಲಕ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ ವಿದ್ಯಾರ್ಥಿಯ ಈ ಅಮೋಘ ಸಾಧನೆಗೆ ಕಾಲೇಜು ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮುಂದಿನ ರಾಷ್ಟ್ರಮಟ್ಟದಲ್ಲೂ ಇಂತಹ ಅದ್ಭುತ ಸಾಧನೆಯನ್ನು ಮಾಡಲು ಈ ಹೆಮ್ಮೆಯ ವಿದ್ಯಾರ್ಥಿನಿಗೆ ಶುಭ ಕೋರಿದರು.