ಹೆಮ್ಮಾಡಿ : ಥೈಲ್ಯಾಂಡ್ ಯೂತ್ ಯೋಗ ಅಸೋಸಿಯೇಷನ್ ಮತ್ತು ವರ್ಲ್ಡ್ ಯೂಥ್ ಯೋಗ ಫೆಡರೇಶನ್ ಹಾಗೂ ವರ್ಷಿಣಿ ಯೋಗ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ರೀಡಾ ಟ್ರಸ್ಟ್ ರಿಜಿಸ್ಟರ್ಡ್ ಶಿವಮೊಗ್ಗ ಕರ್ನಾಟಕ ಇವರ ಸಹಭಾಗಿತ್ವದಲ್ಲಿ ದಿನಾಂಕ 09/12/2024 ಸೋಮವಾರದಂದು ಥೈಲ್ಯಾಂಡ್ ದೇಶದ ಪಟ್ಟಾಯದಲ್ಲಿ ನಡೆದ 6ನೇ ವರ್ಷದ ಅಂತರಾಷ್ಟ್ರೀಯ ಯೋಗ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಏಳು ದೇಶಗಳ ಸ್ಪರ್ಧಿಗಳಲ್ಲಿ ಸುಮಾರು 80 ಜನ ಸ್ಪರ್ಧಿಗಳು ಭಾಗವಹಿಸಿದ್ದರು,ಇವರ ಜೊತೆ ಭಾರತ ದೇಶದಿಂದ 11 ರಿಂದ 15 ವರ್ಷದ ವಯಸ್ಸಿನ ವಿಭಾಗದಲ್ಲಿ ಪ್ರತಿನಿಧಿಸಿದ ಧನ್ವಿ ಪೂಜಾರಿ ಮರವಂತೆ ಇವರು ನಮ್ಮ ಭಾರತ ದೇಶಕ್ಕೆ ಚಿನ್ನದ ಪದಕ ಪಡೆದು ಪ್ರಥಮ ಸ್ಥಾನ ಪಡೆದಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.