182
ಕುಂದಾಪುರ : ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರದ್ದಾ ಎಸ್ ಮೊಗವೀರ ದ್ವಿತೀಯ ಪಿ.ಯು.ಸಿ.ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರಾಂಕ್.
ಪದವಿಪೂರ್ವ ಶಿಕ್ಷಣ ಮಂಡಳಿಯವರು ಆಯೋಜಿಸಿದ 2ನೇ ಹಂತದ ದ್ವಿತೀಯ ಪಿ.ಯು.ಸಿ.ಪರೀಕ್ಷೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರದ್ಧಾ ಎಸ್ ಮೊಗವೀರ 595 /600 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟದಲ್ಲಿ 5ನೇ Rank ಪಡೆದು ಶೈಕ್ಷಣಿಕ ಸಾಧನೆ ಮೆರೆದಿರುತ್ತಾಳೆ.
ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

