ಕೋಟ : 25ನೇ ಸ್ಟೇಟ್ ಮಾಸ್ಟರ್ ಸ್ವಿಮ್ಮಿಂಗ್ ಚಾಂಪಿಯನ್ ಶಿಪ್ ಇವರು ಆಯೋಜಿಸಿದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ್ ಖಾರ್ವಿ ಕೋಡಿ-ಕನ್ಯಾಣ ಮಧ್ಯಪ್ರದೇಶದ ಭೂಪಾಲ್‍ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಈಜು ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ.
ಇವರು 400ಮೀ ಫ್ರೀಸ್ಟೈಲ್ ಚಿನ್ನದ ಪದಕ,50ಮೀ ಬಟರ್ ಫ್ಲೈ ಚಿನ್ನದ ಪದಕ,200ಮೀ ಫ್ರೀಸ್ಟೈಲ್ ಬೆಳ್ಳಿ ಪದಕ,100ಮೀ ಫ್ರೀಸ್ಟೈಲ್ ಬೆಳ್ಳಿ ಪದಕ, 4×50 ಫ್ರೀಸ್ಟೈಲ್ ರಿಲೇ ಬೆಳ್ಳಿ ಪದಕ, 4×100 ಮಿಡ್ಲೆ ರಿಲೇಯಲ್ಲಿ ಬೆಳ್ಳಿ ಪದಕ ಪಡೆದಿರುತ್ತಾರೆ.ಒಟ್ಟು 6 ಪದಕಗಳನ್ನು ಪಡೆದಿರುತ್ತಾರೆ.ಇವರು ಉಡುಪಿಯ ಅಜ್ಜರಕಾಡು ಈಜು ಕೊಳದ ತರಬೇತುದಾರರಾಗಿರುತ್ತಾರೆ.
2013 ರಲ್ಲಿ ಕೈ ಕಾಲುಗಳನ್ನು ಕೋಳದಿಂದ ಬಂಧಿಸಿ ಅರಬ್ಬೀ ಸಮುದ್ರದಲ್ಲಿ 3.71 ಕಿ.ಮೀ. ಈಜಿ ಗಿನ್ನಿಸ್ ವಿಶ್ವ ದಾಖಲೆ ಮಾಡಿದ್ದಾರೆ.ಗೋಪಾಲ್ ಖಾರ್ವಿ ಕೋಡಿ ಕನ್ಯಾಣ ಇವರಿಗೆ ಭಾರತ ಮತ್ತು ಅಮೇರಿಕನ್ ವಿಶ್ವವಿದ್ಯಾಲಯವು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳಾದ “ಃಇSಖಿ SPಔಖಖಿS ಂಅಊIಗಿಇಖ ಂWಂಖಆ” ಮತ್ತು “ಅಇಖಖಿIಈIಅಂಖಿಇ ಔಈ ಇಘಿಅಇಐಐಇಓಅಇ ಂWಂಖಆ ” ನೀಡಿ ಗೌರವಿಸಿದೆ.
ಹಿಂದೆ ಗೋಪಾಲ್ ಖಾರ್ವಿಯವರು ಕರ್ನಾಟಕದ ಅತ್ಯುತ್ತಮ ಪ್ರಶಸ್ತಿಗಳಾದ ಕರ್ನಾಟಕ ರಾಜ್ಯೋತ್ಸವ , ಹಾಗೂ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಯನ್ನು, ರಾಜ್ಯ ಮಟ್ಟದ ಸಂದೇಶ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದು ಇವರ ಈ ಸಾಧನೆಯನ್ನು ಮನಗಂಡ ರಾಜ್ಯ ಸರಕಾರವು ಕರ್ನಾಟಕದ ಕೊಂಕಣಿ 9ನೇ ತರಗತಿಯ ಪಠ್ಯ ಪುಸ್ತಕದಲ್ಲಿ ಜೀವನ ಚರಿತ್ರ ಗೋಪಾಲ್ ಖಾರ್ವಿ ಎಂಬ ಪಾಠವನ್ನು ಪ್ರಕಟಿಸಿರುವುದು ಅವರ ಸಾಧನೆಗೆ ಸಂದ ಅತ್ಯಂತ ಗೌರವಯುತ ಪ್ರಶಸ್ತಿಗಳೊಂದು.