Home » ಸಿ ಎ ಇಂಟರ್ ಮೀಡಿಯೆಟ್ ಸಾಧಕರಿಗೆ ಸನ್ಮಾನ
 

ಸಿ ಎ ಇಂಟರ್ ಮೀಡಿಯೆಟ್ ಸಾಧಕರಿಗೆ ಸನ್ಮಾನ

ತ್ರಿಶಾ ಕ್ಲಾಸಸ್ ಉಡುಪಿ

by Kundapur Xpress
Spread the love

ಕಟಪಾಡಿ : ಸಿ ಎ ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಉತ್ತೀರ್ಣ ರಾದ ವಿದ್ಯಾರ್ಥಿಗಳಿಗೆ ತ್ರಿಶಾ ಕ್ಲಾಸಸ್ ವತಿಯಿಂದ ಸನ್ಮಾನ ಕಾರ್ಯಕ್ರಮವು ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿದ್ದ ತ್ರಿಶಾ ಸಂಸ್ಥೆಯ ಸಂಸ್ಥಾಪಕರು ಸಿಎ ಗೋಪಾಲಕೃಷ್ಣ ಭಟ್ ಅವರು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಜೊತೆಗೆ ತಮ್ಮ ಮುಂದಿನ ಹಂತದಲ್ಲಿ ಇರಬೇಕಾದ ತಾಳ್ಮೆ, ಸತತ ಪ್ರಯತ್ನ, ಕಠಿಣ ಪರಿಶ್ರಮದ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು..

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಹೆತ್ತವರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು ಹಾಗೂ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ತ್ರಿಶಾ ವಿದ್ಯಾ ಕಾಲೇಜಿನ ಪ್ರಾಂಶುಪಾಲರು ನಾರಾಯಣ ರಾವ್ ,ತ್ರಿಶಾ ಸಂಸ್ಥೆಯ ಅಕಾಡೆಮಿಕ್ ಮ್ಯಾನೇಜರ್ ವರದರಾಜ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಾಧ್ಯಾಪಕರಾದ ಆಲ್ಬನ್ ಆಂತೋನಿ ನಿರೂಪಿಸಿದರು.

 

Related Articles

error: Content is protected !!