Home » ವಿಪರೀತ ಜ್ವರ ಬಾಧೆಯಿಂದ ಬಳಲುತ್ತಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ
 

ವಿಪರೀತ ಜ್ವರ ಬಾಧೆಯಿಂದ ಬಳಲುತ್ತಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

by Kundapur Xpress
Spread the love

ಉಡುಪಿ : ಶ್ರೀಕೃಷ್ಣ ಮಠದ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳದಲ್ಲಿ ವಿಪರೀತ ಜ್ವರ ಬಾಧೆಯಿಂದ ಬಳಲುತ್ತಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡುವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿರುವ ಘಟನೆ ನಡೆದಿದೆ.

ವ್ಯಕ್ತಿ ಚಿಕಿತ್ಸೆ ಪಡೆಯಲು ಅಸಹಾಯಕತೆ ಎದುರಿಸುತ್ತಿದ್ದರು. ದಾಖಲಿಸಲ್ಪಟ್ಟಿರುವ ವ್ಯಕ್ತಿಯ ಹೆಸರು ಎನ್.ಆರ್ ಗಿರೀಶ್, ತಂದೆ ರಾಜಪ್ಪ, ಬ್ರಾಹ್ಮಣರಬೀದಿ, ರಾಘವೇಂದ್ರ ಸ್ವಾಮಿ ಮಠ, ನೆಲಮಂಗಲ, ಬೆಂಗಳೂರು ಇಲ್ಲಿಯ ನಿವಾಸಿ ಎಂದು ತಿಳಿದುಬಂದಿದೆ.

ವಾರಸುದಾರರು ಉಡುಪಿಯ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

 

Related Articles

error: Content is protected !!