Home » ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆಯ ಚಿನ್ನಾಭರಣ ಕಳವು
 

ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆಯ ಚಿನ್ನಾಭರಣ ಕಳವು

by Kundapur Xpress
Spread the love

ಕುಂದಾಪುರ : ಕೊಲ್ಲೂರಿನ ದಳಿ ಎಂಬ ಸ್ಥಳದಲ್ಲಿ ಕೇರಳ ಮೂಲದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಜೀಪಿಗೆ ಮೀನು ಸಾಗಾಟದ ಇನ್ಸುಲೇಟ‌ರ್ ವಾಹನವೊಂದು ಭೀಕರವಾಗಿ ಡಿಕ್ಕಿ ಹೊಡೆದು ಜ್ಯೋತಿ ಹಾಗೂ ಅರಿಯಾ ಅನೂಫ್ ಎಂಬುವವರು ಮೃತಪಟ್ಟಿದ್ದರು.ಇತರ ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದರು.ಈ ಅಪಘಾತದಲ್ಲಿ ಸಾವನ್ನಪ್ಪಿದ ಮಹಿಳೆಯ ಮೈಮೇಲಿದ್ದ ಬಂಗಾರದ ಪಾಪಿಗಳು ದೋಚಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳದಲ್ಲಿ ಸೃಷ್ಟಿಯಾಗಿದ್ದ ಗಂಭೀರ ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡ ಕಳ್ಳರು, ಮೃತ ಮಹಿಳೆ ಜ್ಯೋತಿ ಅವರ ಮೈಮೇಲಿದ್ದ ಸುಮಾರು 18ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಕದ್ದೊಯ್ದಿದ್ದಾರೆ ಎಂದು ಅಂದಾಜಿಸಲಾಗಿದೆ.

ಘಟನೆ ನಡೆದು ಒಂದು ವಾರದ ಬಳಿಕ ಮೃತ ಜ್ಯೋತಿ ಅವರ ಕುಟುಂಬಸ್ಥರು ಒಡವೆಗಳನ್ನು ಪರಿಶೀಲಿಸಿದಾಗ ಚಿನ್ನ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ. ತಕ್ಷಣವೇ ಅವರು ಕೊಲ್ಲೂರು ಪೊಲೀಸ್ ಠಾಣೆಗೆ ಧಾವಿಸಿ ಅಧಿಕೃತ ದೂರು ನೀಡಿದ್ದಾರೆ. ಹೆಣದ ಮೇಲಿನ ಒಡವೆ ಕದ್ದ ಖದೀಮರ ಈ ನೀಚ ಬುದ್ಧಿಗೆ ಸ್ಥಳೀಯ ಸಾರ್ವಜನಿಕರು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ಮತ್ತು ಬೇಸರ ವ್ಯಕ್ತವಾಗುತ್ತಿದ್ದು, ಪೊಲೀಸರು ಕಳ್ಳರ ಪತ್ತೆಗೆ ಜಾಲ ಬೀಸಿದ್ದಾರೆ

 

Related Articles

error: Content is protected !!